November 19, 2025

ಉ. ಕ. ಜಿಲ್ಲಾ ಬ್ರಹ್ಮಶ್ರೀ ನಾರಾಯಣ ಗುರುಗಳ ಹಿಂದುಳಿದ ವರ್ಗಗಳ ವೇದಿಕೆಯಿಂದ ಬ್ರಹ್ಮರ್ಷಿ ನಾರಾಯಣ ಗುರು ಜಯಂತಿ :

ಉ. ಕ. ಜಿಲ್ಲಾ ಬ್ರಹ್ಮಶ್ರೀ ನಾರಾಯಣ ಗುರುಗಳ ಹಿಂದುಳಿದ ವರ್ಗಗಳ ವೇದಿಕೆಯಿಂದ ಬ್ರಹ್ಮರ್ಷಿ ನಾರಾಯಣ ಗುರು ಜಯಂತಿ :ನಿವೃತ್ತ ಶಿಕ್ಷಕ ಡಿ. ಬಿ. ನಾಯ್ಕ ಹಾಗೂ ಶಿವಾನಂದ ನಾಯ್ಕರಿಗೆ ಸನ್ಮಾನ

ಹೊನ್ನಾವರ : ಉತ್ತರ ಕನ್ನಡ ಜಿಲ್ಲಾ ಬ್ರಹ್ಮಶ್ರೀ ನಾರಾಯಣ ಗುರುಗಳ ಹಿಂದುಳಿದ ವರ್ಗಗಳ ವೇದಿಕೆಯ ವತಿಯಿಂದ ಹೊನ್ನಾವರದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಕಾರ್ಯಕ್ರಮದಲ್ಲಿ ಭಟ್ಕಳ ಹಾಗೂ ಹೊನ್ನಾವರ ತಾಲೂಕಿನ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಟ್ಕಳ ತಾಲೂಕಿನ ನಿವೃತ್ತ ಶಿಕ್ಷಕ, ಸಹಕಾರಿ ಧುರೀಣ, ಸಮಾಜ ಸೇವಕ, ಹಾಗೂ ನಾಮಧಾರಿ ಸಮಾಜದ ಹಿರಿಯರಾದ ಡಿ. ಬಿ. ನಾಯ್ಕ ಅವರ ಸಾಮಾಜಿಕ, ಶೈಕ್ಷಣಿಕ ಹಾಗೂ ಸಹಕಾರಿ ಕ್ಷೇತ್ರಕ್ಕೆ ನೀಡಿದ ಸೇವೆಗಾಗಿ ಸನ್ಮಾನಿಸಿ ಗೌರವಿಸಲಾಯಿತು. ಹಾಗೆಯೇ ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಸೇವೆಗಾಗಿ ಮುರ್ಡೇಶ್ವರದ ಶಿವಾನಂದ ಡಿ.ನಾಯ್ಕ ಇವರುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊನ್ನಾವರದ ನಾಮಧಾರಿತ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ನ್ಯಾಯವಾದಿ ವಿಕ್ರಮ ನಾಯ್ಕ ವಹಿಸಿದ್ದರು. ವೇದಿಕೆಯಲ್ಲಿ ನೀಲಗೋಡು ಯಕ್ಷ ಚೌಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಮಾಧವ ಸ್ವಾಮಿ, ನಾರಾಯಣಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಕಾರವಾರದ ನ್ಯಾಯವಾದಿ ನಾಗರಾಜ ನಾಯಕ, ಶಿರಾಲಿ ಹೊಳೆಕೋಟೆ ಹನುಮಂತ ದೇವಸ್ಥಾನದ ಅಧ್ಯಕ್ಷ ಆರ್ ಕೆ ನಾಯ್ಕ, ಭಟ್ಕಳ ತಾಲೂಕ ನಾಮಧಾರಿ ಸೇವಾ ಸಮಿತಿ ಅಧ್ಯಕ್ಷ ಭವಾನಿ ಶಂಕರ್ ನಾಯ್ಕ, ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಗೌಡ, ಬೆಂಗಳೂರು ವಿಶ್ವವಿದ್ಯಾಲಯದ ರಾಸಾಯನಶಾಸ್ತ್ರದ ಪ್ರಾಧ್ಯಾಪಕ ಡಾ.ಬಾಬು ಗಿರಿಯ ಗೌಡ, ಭಟ್ಕಳದ ನಾರಾಯಣ ಗುರು ಸಮಿತಿಯ ಸಂಚಾಲಕ ಸತೀಶ್ ಕುಮಾರ್ ನಾಯ್ಕ, ಮಂಕಿಯ ಗೋಲ್ ಇಂಟರ್ನ್ಯಾಷನಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಣ್ಣಪ್ಪ ನಾಯ್ಕ, ಭಟ್ಕಳದ ದೇವಾಡಿಗರ ಸಂಘದ ಕಾರ್ಯದರ್ಶಿ ಸುರೇಶ್ ದೇವಾಡಿಗ, ಬೆಳಕೊಂಡ ಮೀನುಗಾರರ ಸಂಘದ ಅಧ್ಯಕ್ಷ ಉಮೇಶ್ ಮೇಸ್ತ, ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

About The Author

error: Content is protected !!