ಭಟ್ಕಳ: ವಿಶ್ವವಿದ್ಯಾಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಸಾಕ್ಷಿ ನಾಯ್ಕ ಅವರಿಗೆ ಯುನಿವರ್ಸಿಟಿ ಬ್ಲೂ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ವತಿಯಿಂದ ಆಯೋಜಿಸಲಾಗಿದ್ದ ವಿಶ್ವವಿದ್ಯಾಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಟ್ಕಳದ ವಿದ್ಯಾರ್ಥಿನಿ ಕುಮಾರಿ ಸಾಕ್ಷಿ ನಾಯ್ಕ ಅವರು ಗಮನಾರ್ಹ ಸಾಧನೆ ಮಾಡಿ ಯುನಿವರ್ಸಿಟಿ ಬ್ಲೂ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜುನ ವಿದ್ಯಾರ್ಥಿನಿಯಾಗಿರುವ ಸಾಕ್ಷಿ ನಾಯ್ಕ ಅವರು ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಈ ಗೌರವ ಪಡೆದಿದ್ದಾರೆ. ಭಟ್ಕಳ ತಾಲೂಕಿನ ಕವಿತಾ ನಾಯ್ಕ ಹಾಗೂ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುವ ದೇವು ನಾಯ್ಕ ಅವರ ಪುತ್ರಿಯಾದ ಸಾಕ್ಷಿ, ಈ ಆಯ್ಕೆಯೊಂದಿಗೆ ದಕ್ಷಿಣ ಭಾರತ ವಲಯದ ಅಂತರ ವಿಶ್ವವಿದ್ಯಾಲಯ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.
ಈ ಮಹತ್ವದ ಅಂತರ ವಿಶ್ವವಿದ್ಯಾಲಯ ಕ್ರೀಡಾಕೂಟವು ಆಂಧ್ರಪ್ರದೇಶದ ಎನ್.ಟಿ.ಆರ್ ವಿಶ್ವವಿದ್ಯಾಲಯನಲ್ಲಿ ನಡೆಯಲಿದ್ದು, ಸಾಕ್ಷಿ ನಾಯ್ಕ ಅವರು ತಮ್ಮ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾರೆ. ಸಾಕ್ಷಿ ನಾಯ್ಕ ಅವರ ಈ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಆಡಳಿತ ಮಂಡಳಿ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ದೈಹಿಕ ಶಿಕ್ಷಣ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಮುಂದಿನ ಹಂತಗಳಲ್ಲಿಯೂ ಅವರು ಇನ್ನಷ್ಟು ಎತ್ತರದ ಸಾಧನೆ ಮಾಡಿ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲಿ ಎಂದು ಶುಭಾಶಯಗಳನ್ನು ಸಲ್ಲಿಸಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ