ಭಟ್ಕಳ ಶಹರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ
₹1.38 ಲಕ್ಷ ಮೌಲ್ಯದ ನಿಷೇಧಿತ ಇ-ಸಿಗರೇಟ್‌ಗಳು ಹಾಗೂ ನಿಕೋಟಿನ್ ವೇಪ್ಸ್ ವಶ; ಮಾರಾಟಗಾರನ ಬಂಧನ
ಭಟ್ಕಳ: ತಾಲ್ಲೂಕಿನ ಭಟ್ಕಳ ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಹೂವಿನ ಚೌಕ್ ಸಮೀಪದ ದುಬೈ ಮಾರ್ಕೆಟ್‌ನಲ್ಲಿ ಪೊಲೀಸರು ದಾಳಿ ನಡೆಸಿ ನಿಷೇಧಿತ ಎಲೆಕ್ಟ್ರಾನಿಕ್ ಸಿಗರೇಟ್‌ಗಳು ಹಾಗೂ ನಿಕೋಟಿನ್ ಲಿಕ್ವಿಡ್ ವೇಪ್ಸ್‌ಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.

ಈ ದಾಳಿಯಲ್ಲಿ ಒಟ್ಟು ₹1,38,500 ಮೌಲ್ಯದ ವಸ್ತುಗಳು ಪತ್ತೆಯಾಗಿದ್ದು, ಮಾರಾಟಗಾರನನ್ನು ಬಂಧಿಸಲಾಗಿದೆ.ಬಂಧಿತ ಆರೋಪಿ ಸಿದ್ದಿಕ್ ಅಬ್ದುಲ್ ರೆಹಮಾನ್ @ ಮಸ್ತಾನ್ (58), ತಂದೆ ಸಿದ್ದಿಕ್ ಖಾದಿರ ಮೀರಾ, ಕಾರಗದ್ದೆ 2ನೇ ಕ್ರಾಸ್, ಭಟ್ಕಳ ನಿವಾಸಿ. ಆರೋಪಿತನು ತನ್ನ ಅಂಗಡಿಯಲ್ಲಿ ಯಾವುದೇ ಪಾಸ್ ಅಥವಾ ಪರವಾನಿಗೆ ಇಲ್ಲದೆ ನಿಷೇಧಿತ ವಸ್ತುಗಳನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ₹76,000 ಮೌಲ್ಯದ 38 ಎಲೆಕ್ಟ್ರಾನಿಕ್ ಸಿಗರೇಟ್‌ಗಳು ಹಾಗೂ ₹62,500 ಮೌಲ್ಯದ 125 ನಿಕೋಟಿನ್ ಲಿಕ್ವಿಡ್ ರಿಫಿಲ್‌ಗಳು (Vapes) ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಕಾರ್ಯಾಚರಣೆ ಡಿವೈಎಸ್ಪಿ ಮಹೇಶ ಎಂ.ಕೆ ಅವರ ಮಾರ್ಗದರ್ಶನದಲ್ಲಿ, ಸಿಪಿಐ ದಿವಾಕರ ಪಿ.ಎಂ ಅವರ ನೇತೃತ್ವದಲ್ಲಿ ನಡೆಯಿತು. ದಾಳಿಯಲ್ಲಿ ಪಿಎಸೈ ನವೀನ ನಾಯ್ಕ ಹಾಗೂ ಸಿಬ್ಬಂದಿಗಳಾದ ಉದಯ ನಾಯ್ಕ, ದೀಪಕ ನಾಯ್ಕ, ಮಹಾಂತೇಶ ಹಿರೇಮಠ, ಕಾಶಿನಾಥ ಕೊಟಗೊಣಸಿ, ಸುರೇಶ ಮರಾಠಿ, ಜಗದೀಶ ನಾಯ್ಕ ಮತ್ತು ರೇವಣಸಿದ್ದಪ್ಪ ಮಾಗಿ ಪಾಲ್ಗೊಂಡಿದ್ದರು.
ನಿಷೇಧಿತ ಇ-ಸಿಗರೇಟ್ ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಹಾಗೂ ಸಂಗ್ರಹದ ವಿರುದ್ಧ ಮುಂದೆಯೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ