March 2, 2026

ಭಟ್ಕಳ: ಹರ್ಷದ್ ಮಂಜು ಗೊಂಡಾ ರಾಜ್ಯಮಟ್ಟಕ್ಕೆ ಆಯ್ಕೆ

ಭಟ್ಕಳ:ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಬೆಳಗಾವಿಯಲ್ಲಿ ಆಯೋಜಿಸಿದ್ದ ವಿಭಾಗಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಭಟ್ಕಳದ ಝೇಂಕಾರ್ ಚಿತ್ರಕಲಾ ಶಾಲೆಯ ವಿದ್ಯಾರ್ಥಿ ಹರ್ಷದ್ ಮಂಜು ಗೊಂಡಾ ಕಿಶೋರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಚಿತ್ರಕಲಾ ಶಿಕ್ಷಕ ಸಂಜಯ ಗುಡಿಗಾರ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿರುವ ಹರ್ಷದ್, ಇದಕ್ಕೂ ಮೊದಲು 2024ರ ಗ್ರೇಡ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಪಡೆದು ಗಮನ ಸೆಳೆದಿದ್ದರು.


ಹರ್ಷದ್ ಅವರ ಈ ಸಾಧನೆಗೆ ಝೇಂಕಾರ್ ಸಂಸ್ಥೆಯ ಅಧ್ಯಕ್ಷ ಪ್ರಸನ್ನ ಪ್ರಭು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಪಾಲಕವೃಂದದವರು ಅಭಿನಂದನೆ ಸಲ್ಲಿಸಿ, ಮುಂದಿನ ಹಂತಕ್ಕೂ ಶುಭ ಕೋರಿದ್ದಾರೆ.

About The Author

error: Content is protected !!