ಭಟ್ಕಳ: ಮುರುಡೇಶ್ವರ ಸಮೀಪದ ರಾಷ್ಟ್ರೀಯ ಹೆದ್ದಾರಿ–66ರ ಹೊನ್ನಾವರ–ಭಟ್ಕಳ ಮಾರ್ಗದ ಬಸ್ತಿಮಕ್ಕಿ ಬಳಿ ಅತೀವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬರಿಗೆ ಗಂಭೀರ ಗಾಯಗಳಾಗಿವೆ.
ಕಾಯ್ಕಿಣಿ ಕುಂಬಾರಕೇರಿ ನಿವಾಸಿ ಸುರೇಂದ್ರ (31) ಅವರು ಠಾಣೆಗೆ ನೀಡಿದ ದೂರಿನ ಪ್ರಕಾರ, ಕಾರು ಚಾಲಕ ಹರ್ಷತ್ ಮೊಗೇರ (21) ಹೊನ್ನಾವರದಿಂದ ಭಟ್ಕಳದತ್ತ ಅತೀವೇಗದಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಿದ್ದನು. ಈ ವೇಳೆ ಮುರುಡೇಶ್ವರ ಬಸ್ತಿಮಕ್ಕಿ ಬಳಿ ಮುಂದೆ ಸಾಗುತ್ತಿದ್ದ ಮೊಟಾರ್ ಸೈಕಲ್‌ಗೆ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಬೈಕ್ ಸವಾರ ಉದಯ ಕುಂಬಾರ (57) ಅವರಿಗೆ ಎರಡೂ ಕಾಲುಗಳು ಹಾಗೂ ಹೊಟ್ಟೆಗೆ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಸಂಬಂಧ ಆರೋಪಿತ ಕಾರು ಚಾಲಕನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ