ಭಟ್ಕಳ: ತಾಲೂಕಿನ ಸರ್ಪನಕಟ್ಟಾ ರೈಲ್ವೇ ಸೇತುವೆ ಸಮೀಪ ಭಾನುವಾರ (ಜ.4) ಬೆಳಗಿನ ಜಾವ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ರೈಲಿನ ಅಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಮೃತ ವ್ಯಕ್ತಿ ಸುಮಾರು 35 ರಿಂದ 45 ವರ್ಷ ವಯಸ್ಸಿನ ಗಂಡಸಾಗಿದ್ದು, ಬೆಳಗಿನ ಜಾವ 4 ಗಂಟೆಗೆ ಮುನ್ನ ರೈಲ್ವೇ ಹಳಿಯ ಮೇಲೆ ಸಂಚರಿಸುತ್ತಿದ್ದ ರೈಲಿನ ಅಡಿಗೆ ಬಿದ್ದಿರುವ ಸಾಧ್ಯತೆ ಇದೆ.
ಮೃತದೇಹದ ಮೇಲೆ ನೀಲಿ ಬಣ್ಣದ ಚಡ್ಡಿ, ಕಡು ನೀಲಿ ಬಣ್ಣದ ಟ್ರ್ಯಾಕ್ ಪ್ಯಾಂಟ್ ಇದ್ದು, ಬಲ ಕೈಯಲ್ಲಿ ದಾರ (ಕೈದಾರ) ಕಂಡುಬಂದಿದೆ. ಮೃತನ ಹೆಸರು, ವಿಳಾಸ ಹಾಗೂ ಗುರುತು ಇನ್ನೂ ಪತ್ತೆಯಾಗಿಲ್ಲ.

ಈ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಮೃತನ ಗುರುತು ಪತ್ತೆಗಾಗಿ ಪೊಲೀಸರು ಪ್ರಯತ್ನ ಮುಂದುವರಿಸಿದ್ದು, ತಮ್ಮ ವ್ಯಾಪ್ತಿಯಲ್ಲಿ ಕಾಣೆಯಾದ ವ್ಯಕ್ತಿಗಳ ಪ್ರಕರಣಗಳೊಂದಿಗೆ ಚಹರೆ ಹೊಂದಿಕೆಯಾಗಿದ್ದರೆ ಅಥವಾ ಮೃತನ ಬಗ್ಗೆ ಯಾವುದೇ ಮಾಹಿತಿ ಲಭ್ಯವಿದ್ದಲ್ಲಿ ಠಾಣೆಯನ್ನು ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಸಂಪರ್ಕ:
☎ 08385-226813 | 08385-227333 | 📱 9480805252
ತುರ್ತು ಸಹಾಯ: 100

More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ