March 2, 2026

ಭಟ್ಕಳದಲ್ಲಿ 28ಕ್ಕೆ ರಾಜ್ಯ ಮಟ್ಟದ ಪತ್ರಕರ್ತರ ಸಮಾವೇಶ – ಆಮಂತ್ರಣ ಬಿಡುಗಡೆ

ಭಟ್ಕಳ :ಜನವರಿ 28, 2026ರಂದು ಭಟ್ಕಳದ ನಾಗಯಕ್ಷೆ ಧರ್ಮಾರ್ಥ ಸಭಾಭವನದಲ್ಲಿ ನಡೆಯಲಿರುವ ರಾಜ್ಯ ಪತ್ರಕರ್ತರ ವಿಚಾರ ಸಂಕಿರಣ ಹಾಗೂ ರಾಜ್ಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹೊನ್ನಾವರದ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ಮಾರುತಿ ಗುರೂಜಿ ಅವರು ಭಾನುವಾರ ಬಿಡುಗಡೆಗೊಳಿಸಿದರು. ಈ ಕಾರ್ಯಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ – ಭಟ್ಕಳ ಘಟಕದ ಆಶ್ರಯದಲ್ಲಿ ಆಯೋಜಿಸಲಾಗಿದೆ.


ಕಾರ್ಯಕ್ರಮದಲ್ಲಿ ಶ್ರೀ ಮಾರುತಿ ಗುರೂಜಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗಡೆ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮಂಕಾಳ್ ವೈದ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ರಾಜ್ಯಾಧ್ಯಕ್ಷರ ಉಪಸ್ಥಿತಿಯಲ್ಲಿ, ಗ್ಯಾರಂಟಿ ನ್ಯೂಸ್ ಮುಖ್ಯಸ್ಥೆ ರಾಧಾ ಹಿರೇಗೌಡರ್ ಹಾಗೂ ಶ್ರೀ ಗಂಗಾಧರ್ ಮೊದಲಿಯಾರ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಶಿವಾನಂದ್ ನಾಯ್ಕ್, ತಂಜುಮ್ ಸಂಸ್ಥೆಯ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.


ಕಾರ್ಯಕ್ರಮದ ಭಾಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂತೋಷ್ ಹೆಗಡೆ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ, ರಾಜ್ಯದ ಸಾಧಕರಿಗೆ ರಾಜ್ಯ ಪ್ರಶಸ್ತಿ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪತ್ರಿಕಾ ವಿತರಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.
ಮೊದಲ ಆಮಂತ್ರಣ ಪತ್ರಿಕೆಯನ್ನು ಶ್ರೀ ಮಾರುತಿ ಗುರೂಜಿ ಅವರಿಗೆ ನೀಡಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವಂತೆ ಕೋರಲಾಗಿದ್ದು, “ಈ ಮಹತ್ವದ ಕಾರ್ಯಕ್ರಮಕ್ಕೆ ಸಾನಿಧ್ಯ ವಹಿಸಿ ಆಶೀರ್ವದಿಸುತ್ತೇನೆ” ಎಂದು ಅವರು ಭರವಸೆ ನೀಡಿದರು.


ಆಮಂತ್ರಣ ಪತ್ರಿಕೆ ಬಿಡುಗಡೆ ಸಂದರ್ಭದಲ್ಲಿ ಕಾನಿಪ ದ್ವನಿ ಭಟ್ಕಳ ಅಧ್ಯಕ್ಷ ಶಂಕರ್ ನಾಯ್ಕ್, ಖಜಾಂಚಿ ನಸೀಮ್ ಮುಲ್ ಘನಿ, ಕರಾವಳಿ ವಿಭಾಗ ಅಧ್ಯಕ್ಷ ಕುಮಾರ್ ನಾಯ್ಕ್, ಉಡುಪಿ ಜಿಲ್ಲಾ ಅಧ್ಯಕ್ಷ ದಾಮೋದರ ಮೋಗವೀರ, ಶಿರಸಿ ಅಧ್ಯಕ್ಷ ರಾಜೇಶ್ ಮೋಗೇರ, ಉತ್ತರ ಕನ್ನಡ ಜಿಲ್ಲಾಪ್ರಧಾನ ಕಾರ್ಯದರ್ಶಿ ಸೀತಾರಾಮ್ ಆಚಾರ್ಯ, ಶಿರಸಿ ಸದಸ್ಯ ಶ್ರೀನಿವಾಸ್ ಆಚಾರ್ ಹಾಗೂ ರಮೇಶ್ ಉಪಸ್ಥಿತರಿದ್ದರು.

About The Author

error: Content is protected !!