March 4, 2026

ಕೆಎಸ್‌ಆರ್‌ಸಿಟಿ ಬಸ್‌ ಹಾಗೂ ಟಿಪ್ಪರ್‌ ನಡುವೆ ನಡೆದ ಭೀಕರ ರಸ್ತೆ ಅಪಘಾತ

20ಕ್ಕೂ ಅಧಿಕ ಕಾಲೇಜು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನೇರಳಕಟ್ಟೆ ಸಮೀಪದ ಶೆಟ್ರಕಟ್ಟೆ ಎಂಬಲ್ಲಿ ನಡೆದಿದೆ.

ಕುಂದಾಪುರದಿಂದ ಆಜ್ರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಸಿ ಬಸ್ಸಿಗೆ ವೇಗವಾಗಿ ಬಂದ ಟಿಪ್ಪರ್‌ ಢಿಕ್ಕಿ ಹೊಡೆದಿದೆ. ಬಸ್ಸಿನ ಒಂದು ಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.
ಕೆಎಸ್‌ಆರ್‌ಟಿಸಿ ಬಸ್‌ – ಟಿಪ್ಪರ್‌ ಅಪಘಾತ : ಸಿಸಿ ಕ್ಯಾಮೆರಾ ದಲ್ಲಿ ಸೆರೆಯಾಗಿದೆ,ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಕ್ರಾಂತವಾಗಿದೆ, 20ಕ್ಕೂ ಅಧಿಕ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಂಜೆಯ ಸಮಯವಾಗಿರುವ ಹಿನ್ನೆಲೆಯಲ್ಲಿ ಬಸ್ಸಿನಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಇದ್ದರು ಎನ್ನಲಾಗುತ್ತಿದೆ.


ಕಿಟಕಿ ಬದಿಯಲ್ಲಿ ಕುಳಿತಿದ್ದ ಹಲವರಿಗೆ ಗಂಭೀರ ಗಾಯವಾಗಿದೆ. ಸ್ಥಳೀಯ ಯುವಕ ಪ್ರಶಾಂತ ಪೂಜಾರಿ ಕರ್ಕಿ ಹಾಗೂ ಸಾರ್ವಜನಿಕರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕರಿಸಿದ್ದಾರೆ. ಲಾರಿ ಚಾಲಕನ ವೇಗ ಹಾಗೂ ಅಜಾಗರೂಕತೆಯೇ ಕಾರಣ ಎನ್ನಲಾಗುತ್ತದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

About The Author

error: Content is protected !!