ಕೆಆರ್ ಪೇಟೆ :ವಿಜ್ಞಾನ ಹಾಗೂ ತಂತ್ರಜ್ಞಾನದ ಆವಿಷ್ಕಾರಗಳ ಫಲದಿಂದಾಗಿ ದೇಶದ ಸಮಗ್ರವಾದ ಅಭಿವೃದ್ಧಿಗೆ ಸಹಾಯವಾಗಿದೆಯೆಂದು ಆಡೀಟರ್ ಪಿ.ವಿ.ರಮೇಶ್ ಹೇಳಿದರು.
ಅವರು ಕೃಷ್ಣರಾಜಪೇಟೆ ಪಟ್ಟಣದ ಹೇಮಾವತಿ ಬಡಾವಣೆಯಲ್ಲಿರುವ ಕೇಂ ಬ್ರಿಡ್ಜ್ ಪಬ್ಲಿಕ್ ಸ್ಕೂಲ್’ನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಸಸಿಗೆ ನೀರೇರೆಯುವ ಮೂಲಕ ಉದ್ಘಾಟಿಸಿ ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾ ಪ್ರಪಂಚವನ್ನು ವಿದ್ಯಾರ್ಥಿಗಳು ಹಾಗೂ ಯುವ ಜನರು ಆತ್ಮ ವಿಶ್ವಾಸದಿಂದ ಎದುರಿಸಿ ಮುನ್ನಡೆದು ಸಾಧನೆಯನ್ನು ಮಾಡಬೇಕಾದರೆ ವಿಜ್ಞಾನ ಮತ್ತು ತಂತ್ರಜ್ಞಾನದ ಆವಿಷ್ಕಾರಗಳ ಫಲವನ್ನು ಪಡೆಯುವುದು ಇಂದಿನ ಅಗತ್ಯವಾಗಿದೆ. ವೈಜ್ಞಾನಿಕ ಮಾದರಿಯ ಹಲವು ಆವಿಷ್ಕಾರ ಮಾಡಿರುವ ವಿದ್ಯಾರ್ಥಿಗಳು ವಿಜ್ಞಾನದ ಪ್ರಯೋಗದಿಂದ ಆಗುವ ಪ್ರಯೋಜನಗಳ ಬಗ್ಗೆ ಇಂದಿನ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಪ್ರಾತ್ಯಕ್ಷಿತೆಯ ಮೂಲಕ ವಿವರಿಸಿ ಮಾಹಿತಿ ನೀಡಿದ್ದಾರೆ. ವಿಜ್ಞಾನದ ಆವಿಷ್ಕಾರದ ಫಲವನ್ನು ದೇಶದ ಸಮಗ್ರವಾದ ಅಭಿವೃದ್ಧಿಗೆ ಬಳಸಿಕೊಳ್ಳುವುದರಿಂದ ವಿಶ್ವದ ಅಮೇರಿಕಾ, ಚೀನಾ, ಜಪಾನ್ ಸೇರಿದಂತೆ ಹಲವು ರಾಷ್ಟ್ರಗಳಿಂದ ಭಾರತ ದೇಶವು ಎದುರಿಸುತ್ತಿರುವ ಪೈಪೋಟಿಯನ್ನು ಸಮರ್ಥವಾಗಿ ಎದುರಿಸಿ ಭಾರತೀಯರಾದ ನಾವು ಕೂಡ ವೈಜ್ಞಾನಿಕ ಹಾಗೂ ಬಾಹ್ಯಾಕಾಶ ಸಂಶೋಧನೆಯಲ್ಲಿ ಕಡಿಮೆ ಇಲ್ಲ ಎಂಬುದನ್ನು ಸಾಬೀತುಪಡಿಸಲು ಸಾಧ್ಯವಾಗಿದೆ ಎಂದು ತಿಳಿಸಿದ ರಮೇಶ್ ವಿದ್ಯಾರ್ಥಿಗಳ ಸಮಗ್ರವಾದ ವ್ಯಕ್ತಿತ್ವದ ವಿಕಸನಕ್ಕೆ ವೈಜ್ಞಾನಿಕ ಮನೋಭಾವನೆ ಹಾಗೂ ಸಂಶೋಧನೆಯ ವರದಾನವಾಗಿದೆ ಎಂದು ಹೇಳಿದರು.
ಕೇಂಬ್ರಿಡ್ಜ್ ಶಾಲೆಯ ಆಡಳಿತ ಅಧಿಕಾರಿ ಶಿವಕುಮಾರ್ ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಅಧ್ಯಾಪಕ ವೃಂದ ಪೋಷಕರು ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ಪ್ರದರ್ಶನ ಮಾಡಿದ ವೈಜ್ಞಾನಿಕ ಮಾದರಿಗಳನ್ನು ಕಂಡು ರೋಮಾಂಚನಗೊಂಡರು. ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ, ಮಂಡ್ಯ.

About The Author


More Stories
ಪೌರಕಾರ್ಮಿಕ ಮಹಿಳೆಯರಿಗೆ ಬಾಗಿನ ಸಮರ್ಪಣೆ, ರಾಕಿ ಕಟ್ಟಿ ಗೌರವಿಸಿದ ಕೆ.ಆರ್.ಪೇಟೆ ಬಿಜೆಪಿ
ಕ್ರೈಸ್ಟ್ ದಿ ಕಿಂಗ್ ಪಿಯು ಕಾಲೇಜಿನಲ್ಲಿ ವಿದ್ಯಾಜ್ಯೋತಿ ಸಮಾರಂಭ: ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ
ಪ್ರತಿ ಶನಿವಾರ ಹೋಬಳಿ ಮಟ್ಟದಲ್ಲಿ ‘ಪ್ರಜಾ ಸೇವಾ ಆಂದೋಲನ’: ಫಲಾನುಭವಿಗಳ ಮನೆ ಬಾಗಿಲಿಗೆ ಸರ್ಕಾರಿ ಸೇವೆ – ತಹಶೀಲ್ದಾರ್ ಶ್ರೇಯಸ್