ಭಟ್ಕಳ: ಮೀನುಗಾರಿಕೆಗೆ ತೆರಳುವ ವೇಳೆ ಕಾಲು ಜಾರಿ ಸಮುದ್ರಕ್ಕೆ ಬಿದ್ದ ಪರಿಣಾಮ ಮೀನುಗಾರನೊಬ್ಬರು ಮೃತಪಟ್ಟಿರುವ ದುರ್ಘಟನೆ ಭಟ್ಕಳ ತಾಲೂಕಿನ ಮಾವಿನಕುರ್ವಾ ಬಂದರಿನಲ್ಲಿ ನಡೆದಿದೆ.
ಕಾಯ್ಕಿಣಿ ಮೂಡಕೇರಿ ಬಸ್ತಿ ನಿವಾಸಿ ಶಂಕರ ತಂದೆ ಸಣ್ಣತಮ್ಮ ನಾಯ್ಕ (40) ಮೃತರಾಗಿದ್ದಾರೆ. ದೂರು ಪ್ರಕಾರ, ಶಂಕರ ನಾಯ್ಕ ಅವರು ರಾತ್ರಿ ಸಮಯದಲ್ಲಿ ಮೀನುಗಾರಿಕೆಗೆ ಹೊರಡುವ ಉದ್ದೇಶದಿಂದ ಬಂದರಿನಲ್ಲಿ ನಿಲ್ಲಿಸಿದ್ದ ಬೋಟಿಯಲ್ಲಿ ಬಲೆ ತಯಾರಿಯಲ್ಲಿ ತೊಡಗಿಸಿಕೊಂಡಿದ್ದರು. ಈ ಸಂದರ್ಭ ದಕ್ಕೆಯಿಂದ ಬೋಟಿಗೆ ಹತ್ತಲು ಯತ್ನಿಸಿದಾಗ, ದಕ್ಕೆ ಹಾಗೂ ಬೋಟಿಯ ಮಧ್ಯೆ ಆಳವಾದ ನೀರಿನ ಭಾಗದಲ್ಲಿ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ. ಮೇಲಕ್ಕೆ ಬರಲು ಸಾಧ್ಯವಾಗದೇ ಅವರು ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಮೃತನ ಪತ್ನಿ ಗಿರಿಜಾ ಕೋಂ. ಶಂಕರ ನಾಯ್ಕ ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಕರಾವಳಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ 112 ಇಆರ್‌ಎಸ್ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
About The Author


More Stories
ರೈತರ ಕೃಷಿ ರಸ್ತೆಗೆ ಅಡ್ಡಿ ಆರೋಪ: ತಹಶೀಲ್ದಾರ್ ಕಚೇರಿಗೆ ಮನವಿ
ಅಧಿಕಾರ ಸ್ವೀಕರಿಸಿದ 24 ಗಂಟೆಯಲ್ಲೇ ಅಕ್ರಮ ಮರಳು ಸಾಗಾಟಕ್ಕೆ ಬಿಸಿ ಮುಟ್ಟಿಸಿದ ಎಎಸ್ಪಿ ರಾನು ಗುಪ್ತ: 6 ಟಿಪ್ಪರ್ಗಳು, 6 ಮಂದಿ ವಶಕ್ಕೆ
ವಿಧಾನಸಭೆ ಉಪಸಭಾಧ್ಯಕ್ಷ ಮಂಕಾಳ ವೈದ್ಯರಿಗೆ ಕೆಡಿಸಿಸಿ ಬ್ಯಾಂಕ್ ನೌಕರರಿಂದ ಸನ್ಮಾನ