ಭಟ್ಕಳ: ಭಟ್ಕಳ ತಾಲೂಕಿನ ಸರ್ಪನಕಟ್ಟಾ ರೈಲ್ವೇ ಸೇತುವೆ ಸಮೀಪ ಭಾನುವಾರ ಬೆಳಗಿನ ಜಾವ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಮೃತದೇಹದ ಗುರುತು ಕೊನೆಗೂ ಪತ್ತೆಯಾಗಿದೆ. ಕೈಮೇಲಿನ ಸೀಕ್ ಗುರುತು ಆಧರಿಸಿ ತನಿಖೆ ನಡೆಸಿದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ವಾರಸುದಾರರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಮೃತರನ್ನು ಗಣಪತಿ ಸಾತಾ ಹಳ್ಳೇರ (50) ಎಂದು ಗುರುತಿಸಲಾಗಿದ್ದು, ಅವರು ಹೊನ್ನಾವರ ತಾಲೂಕಿನ ಮೇಲಿನ ಮೂಡಕಣಿ ಜನತಾ ಪ್ಲಾಟ್ ನಿವಾಸಿ ಎಂದು ತಿಳಿದುಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಗಣಪತಿ ಹಳ್ಳೇರ ಅವರು ಮೀನುಗಾರಿಕೆ ಕೆಲಸಕ್ಕಾಗಿ ಬೋಟಿಯಲ್ಲಿ ಭಟ್ಕಳ ಕ್ಕೆ ಆಗಮಿಸಿದ್ದರು.
ಜನವರಿ 2, 2026ರಂದು ಭಟ್ಕಳದ ತೆಂಗಿನಗುಂಡಿ ಹೆರ್ತಾರ ಕ್ರಾಸ್‌ನಿಂದ ತಮ್ಮ ಮನೆಗೆ ತೆರಳುವುದಾಗಿ ತಿಳಿಸಿ ಹೊರಟಿದ್ದ ಅವರು ಮನೆಗೆ ಮರಳದೇ ನಾಪತ್ತೆಯಾಗಿದ್ದರು. ಈ ಕುರಿತು ಮೃತರ ಪುತ್ರರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು.
ದೂರು ಆಧರಿಸಿ ತನಿಖೆ ಕೈಗೊಂಡ ಪೊಲೀಸರು ಮೃತದೇಹದ ಗುರುತನ್ನು ದೃಢಪಡಿಸಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ