ಹೊನ್ನಾವರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕಲೆ, ಸಾಹಿತ್ಯ, ಸಮಾಜ ಸೇವೆ, ಕ್ರೀಡೆ, ಪರಿಸರ ಸಂರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆ ಮಾಡಿದ ಯುವ ಪ್ರತಿಭೆಗಳನ್ನು ಗುರುತಿಸಿ ನೀಡುವ ಗೌರವ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿಯನ್ನು ವಿವೇಕಾನಂದರ ಹೆಸರಿನಲ್ಲಿ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಎಂದು ಸಹ ಕರೆಯಲಾಗುತ್ತದೆ ಮತ್ತು ಇದು ಯುವಕರಿಗೆ ಪ್ರೇರಣೆ ನೀಡುತ್ತದೆ. ಕಲೆ, ಸಾಹಿತ್ಯ, ಸಮಾಜ ಸೇವೆ, ಪರಿಸರ ಸಂರಕ್ಷಣೆ, ಕ್ರೀಡೆ, ವೈಜ್ಞಾನಿಕ ಸಂಶೋಧನೆ ಮುಂತಾದ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ 30 ಸಾಧಕ ಯುವಕರಿಗೆ ನೀಡಲಾಗುತ್ತದೆ.
ಹೋನ್ನಾವರ ತಾಲೂಕಿನ ಗುಣವಂತೆಯ ಧರ್ಮ ಗಣಪತಿ ಗೌಡ ಧಾರವಾಡ ವಿಶ್ವವಿದ್ಯಾಲಯದಿಂದ ಸಮಾಜಶಾಸ್ತ್ರ, ಎಂ.ಎ, ಮೈಸೂರು ವಿಶ್ವವಿದ್ಯಾಲಯದಿಂದ ಇತಿಹಾಸ ಎಂ.ಎ, ಪ್ರಸುತ್ತ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ ಅಧ್ಯಯನ ಮಾಡುತ್ತಿದ್ದಾರೆ. ಸಂಶೋಧನಾ ಅಧ್ಯಯನದಲ್ಲಿ ಡಾ ವಿರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಕಿರು ಪ್ರಬಂಧ ರಚನೆ,ಉತ್ತರ ಕನ್ನಡ ಜಿಲ್ಲೆಯ ಶಾಸನದ ಕುರಿತು ಕಿರು ಪ್ರಬಂಧ, ಹಲವಾರು ಕಿರು ಲೇಖನಗಳು ಪ್ರಕಟಗೊಂಡಿದೆ. ಜಾನಪದ ಯುವ ಬ್ರೀಗೆಡ್ ನಲ್ಲಿ 5 ವರ್ಷ ಸೇವೆ ಸಲ್ಲಿಸಿದ್ದು, ಜಿಲ್ಲೆಯ ಜಾನಪದ ಕಲೆಯ ಬಗ್ಗೆ ಜಾನಪದ ರಾಜ್ಯಾಧ್ಯಕ್ಷ ಡಾ. ಎಸ್. ಬಾಲಾಜಿಯವರ ಮಾರ್ಗದರ್ಶನದಲ್ಲಿ ಸಂಶೋಧನಾ ಲೇಖನ ರಚನೆ ಮಾಡಿದ್ದು ಇದನ್ನು ಗುರುತಿಸಿ ಯುತ್ ಬ್ರೀಗೇಡ್ ಉತ್ತರ ಕನ್ನಡ ಜಿಲ್ಲೆಯಿಂದ ರಾಜ್ಯ ಯುವ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಿದ್ದಾರೆ.
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇವರ ಸಹಯೋಗದಲ್ಲಿ ಜನವರಿ 17 & 18 ರಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ಆವಾರದಲ್ಲಿ ನಡೆಯುವ “ರಾಜ್ಯ ಮಟ್ಟದ ಯುವ ಸಂಭ್ರಮ”ದಲ್ಲಿ ಮೂವತ್ತು ಸಾಧಕರಿಗೆ ಹಾಗೂ ಸಾಂಘಿಕ ಪ್ರಶಸ್ತ್ರಿ ಪ್ರಧಾನವಾಗಲಿದೆ.

More Stories
ಕಿರಿಯ ಪ್ರಾಥಮಿಕ ಶಾಲೆ ಯಲಕೊಟ್ಟಿಗೆ 2024 25 ನೇ ಶೈಕ್ಷಣಿಕ ವರ್ಷದ ಉತ್ತಮ ಸಾಧನೆಗಾಗಿ ಜಿಲ್ಲಾ ಮಟ್ಟದ ಉತ್ತಮ ಎಸ್. ಡಿ. ಎಂ. ಸಿ. ಪ್ರಶಸ್ತಿ
‘ಜನಸಾಮಾನ್ಯರಲ್ಲೂ ವಿಜ್ಞಾನದ ಅರಿವು ಅಗತ್ಯ’
ಹೊನ್ನಾವರದಲ್ಲಿ ಇಂದು ಆರ್ ವಿ ದೇಶಪಾಂಡೆ