January 14, 2026

ಬರ್ಗಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿವೇಕ ವಿದ್ಯಾರ್ಥಿ ಪರೀಕ್ಷೆಯಲ್ಲಿ ರ್‍ಯಾಂಕ್


ತುಮಕೂರು : ಇಲ್ಲಿನ ರಾಮಕೃಷ್ಣ – ವಿವೇಕಾನಂದ ಭಾವ ಪ್ರಚಾರ ಪರಿಷತ್ತಿನ ವಿವೇಕ ವಿದ್ಯಾರ್ಥಿ ಪರೀಕ್ಷೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಬರ್ಗಿಯ ಸರ್ಕಾರಿ ಪ್ರೌಢ ಶಾಲೆಯ 8ನೇ ತರಗತಿಯ ಧನ್ಯ ಈಶ್ವರ ಪಟಗಾರ ಹಾಗೂ 10ನೇ ತರಗತಿಯ ಶೃದ್ಧಾ ಪಾಂಡುರಂಗ ಪಟಗಾರರವರು ಉತ್ತರ ಕನ್ನಡ ಜಿಲ್ಲೆಗೆ ತೃತೀಯ ಸ್ಥಾನವನ್ನು ಪಡೆದರೆ, ನಂದನ ನಾರಾಯಣ ನಾಯಕರವರು ತಾಲ್ಲೂಕಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ ಎಂದು ಉತ್ತರ ಕನ್ನಡ ಜಿಲ್ಲಾ ಪರೀಕ್ಷಾ ಸಂಯೋಜಕಿ ಡಾ. ಶ್ರೀದೇವಿ ಭಟ್ ರವರು ತಿಳಿಸಿರುತ್ತಾರೆ.


ಬರ್ಗಿ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮುಖ್ಯಾಧ್ಯಾಪಕರಾದ ಮಧುಕೇಶ್ವರ ನಾಯ್ಕ, ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಿದ ಸಂಸ್ಕೃತ ಅಧ್ಯಾಪಕರಾದ ಮಂಜುನಾಥ ಗಾಂವಕರ್ ಬರ್ಗಿ, ಬರ್ಗಿಯ ಶ್ರೀ ಮಹಾಲಿಂಗೇಶ್ವರ ವಿದ್ಯಾಪೀಠದ ಪೀಠಾಧ್ಯಕ್ಷರಾದ ಬಿ. ಎನ್. ಗಾಂವಕರ್, ಪ್ರೌಢ ಶಾಲಾ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ನಾಗರಾಜ ಕೃಷ್ಣ ನಾಯ್ಕ ಹಾಗೂ ವಿದ್ಯಾರ್ಥಿ ಪಾಲಕರಾದ ನಾರಾಯಣ ನಾಗು ನಾಯಕ ಮೊದಲಾದವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

About The Author

error: Content is protected !!