March 1, 2026

ಸಾವಿರಾರು ಭಕ್ತರ ಜಯಘೋಷದೊಂದಿಗೆ ಮಾತ್ಹೋಬಾರಶ್ರೀ ಮುರ್ಡೇಶ್ವರ ಮಹಾರಥೋತ್ಸವ ವೈಭವ

ಭಟ್ಕಳ: ತಾಲೂಕಿನ ಪ್ರಸಿದ್ದ ಪ್ರವಾಸಿ ತಾಣವಾದ ಮುರ್ಡೇಶ್ವರದ ಮಾತ್ಹೋಬಾರ ಶ್ರೀ ಮುರ್ಡೇಶ್ವರ ದೇವರ ರಥೋತ್ಸವ ಕಾರ್ಯಕ್ರಮ ಸಾವಿರಾರು ಭಕ್ತಾಧಿಗಳ ಹರ್ಷೋದ್ಗಾರಗಳ ನಡುವೆ ವಿಜೃಂಭಣೆಯಿAದ ಮಂಗಳವಾರ ಸಂಜೆ ನಡೆಯಿತು.


ಜನವರಿ 15ರಿಂದ ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿ ಜ೨೦ರಂದು ಮಹಾರಥೋತ್ಸವ ಜರುಗಿತು. ಮಹಾರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೆ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹೋಮ ಹವನಗಳನ್ನು ವಿಧಿವತ್ತಾಗಿ ನಡೆಸಲಾಯಿತು. ಮಧ್ಯಾಹ್ನ ದಿಂದ ಸಾವಿರಾರು ಭಕ್ತಾಧಿಗಳು ರಥಕಾಣಿಕೆ ನೀಡಿ ಪೂಜೆ ಪುರಸ್ಕಾರ ನೆರವೇರಿಸಿ ರಥೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಂಜೆ 5:30 ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಮಾಹಾರಥವನ್ನು ದೇವಸ್ಥಾನದ ಕೆರೆಯ ಸುತ್ತ ಭಕ್ತಾದಿಗಳ ಜಯಘೋಷದೊಂದಿಗೆ ಎಳೆಯಲಾಯಿತು. ರಥೋತ್ಸವದ ಸಂದರ್ಬದಲ್ಲಿ ಸೂಮಾರು 10ಸಾವಿರಕ್ಕೂ ಅಧಿಕ ಭಕ್ತಾಧಿಗಳು ಪಾಲ್ಗೊಂಡಿದ್ದರು ಎನ್ನಲಾಗಿದೆ. ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ದೇವಸ್ಥಾನದ ಆಡಳಿತ ಧರ್ಮದರ್ಶಿ ಸತೀಶ ಆರ್ ಶೆಟ್ಟಿ, ಮಾಜಿ ಶಾಸಕ ಸುನೀಲ ನಾಯ್ಕ,
ಮಾವಳ್ಳಿ 1 ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಯನಾ ನಾಯ್ಕ,ಪ್ರಧಾನ ಅರ್ಚಕರಾದ ಜಯರಾಮ ಅಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ, ಕಾಂಗ್ರೆಸ್ ರಾಜ್ಯ ಮಹಿಳಾ ಕಾರ್ಯದರ್ಶಿ ಕು. ಬೀನಾ ವೈದ್ಯ, ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣ ನಾಯ್ಕ ಜಮೀನ್ದಾರ, ಕೈಕಿಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜು ನಾಯ್ಕ, ಉದ್ಯಮಿಗಳಾದ ಗಣೇಶ್ ಹರಿಕಾಂತ್,ಹಾಗೂ ಉದ್ಯಮಿಗಳಾದ ಮಾಸ್ತಪ್ಪ ನಾಯ್ಕ ಉಪಸ್ಥಿತರಿದ್ದರು.


ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಡಿ ವೈ ಎಸ್ ಪಿ ಮಹೇಶ ಎಂ ಕೆ, ಮುರ್ಡೇಶ್ವರ ವೃತ್ತ ನಿರೀಕ್ಷಕ ಜಗದೀಶ ಹಂಚನಾಳ್ ಹಾಗೂ ಪಿ ಎಸ್ ಐ ಹನುಮಂತ ಬಿರಾದಾರ ನೇತೃತ್ವದಲ್ಲಿ ದೂರದಿಂದ ಬಂದಿರುವ ಭಕ್ತರ ಹಿತ ದೃಷ್ಟಿ ಕಾಪಾಡುವ ನಿಟ್ಟಿನಲ್ಲಿ ಉತ್ತಮ ಬಂದೋಬಸ್ತ ನೀಡಿದ್ದರು.
ಭಕ್ತರ ವಾಹನ ಪಾರ್ಕಿಂಗಿಗಾಗಿ ಪೇ ಎಂಡ್ ಪಾರ್ಕ ಸೌಲಭ್ಯ ಒದಗಿಸಲಾಗಿತ್ತು.

About The Author

error: Content is protected !!