ಹೊನ್ನಾವರ: ನಗರದ ಪ್ರಸಿದ್ಧ ವೈದ್ಯರಾಗಿದ್ದ ಅರುಣ. ಬಿ. ಕಾರ್ಕಳ (84) ರವಿವಾರ ಮುಂಜಾನೆ ನಿಧನರಾದರು. ಪ.ಪಂ. ಅಧ್ಯಕ್ಷರಾಗಿ, ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ನ್ಯೂ ಎಜಕೇಶನ್ ಸೊಸೈಟಿ ಅಧ್ಯಕ್ಷರಾಗಿ, ಹಿಂದು ಸೇವಾ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷರಾಗಿ, ಎಂಪಿ.ಇ ಸಂಸ್ಥೆಯ ಉಪಾಧ್ಯಕ್ಷರಾಗಿ, ಅರ್ಬನ್ ಬ್ಯಾಂಕ್ ನಿರ್ದೆಶಕರಾಗಿ ಅಮೂಲಾಗ್ರ ಸೇವೆ ಸಲ್ಲಿಸಿದ್ದರು. ವಿವಿಧ ಸಂಘಟನೆಗಳ ಜೊತೆ ಸಹಕಾರಿಯಾಗಿ ಕಾರ್ಯಕ್ರಮ ಯಶ್ವಸಿಗೆ ಸಹಕರಿಸಿದ್ದರು. ಮಧ್ಯರಾತ್ರಿ ಕರೆ ನೀಡಿದರೂ ಮನೆ, ಮನೆಗೆ ತೆರಳಿ ವೈದ್ಯಕೀಯ ಸೇವೆ ನೀಡುವ ಮೂಲಕ ಇವರು ನಗರದಲ್ಲಿ ಬಹು ಜನಪ್ರಿಯರಾಗಿದ್ದರು. ಪತ್ನಿ, ಮಗಳನ್ನು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಅರ್ಬನ್ ಬ್ಯಾಂಕ್ ಅಧ್ಯಕ್ಷ ರಾಘವ ಬಾಳೇರಿ, ನ್ಯೂ ಎಜುಕೇಶನ್ ಸೊಸೈಟಿ ಅಧ್ಯಕ್ಷ ರಘು ಪೈ, ಸಾಮಾಜಿಕ ಕಾರ್ಯಕರ್ತರಾದ ರಾಜು ಭಂಡಾರಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

More Stories
ಕಿರಿಯ ಪ್ರಾಥಮಿಕ ಶಾಲೆ ಯಲಕೊಟ್ಟಿಗೆ 2024 25 ನೇ ಶೈಕ್ಷಣಿಕ ವರ್ಷದ ಉತ್ತಮ ಸಾಧನೆಗಾಗಿ ಜಿಲ್ಲಾ ಮಟ್ಟದ ಉತ್ತಮ ಎಸ್. ಡಿ. ಎಂ. ಸಿ. ಪ್ರಶಸ್ತಿ
‘ಜನಸಾಮಾನ್ಯರಲ್ಲೂ ವಿಜ್ಞಾನದ ಅರಿವು ಅಗತ್ಯ’
ಹೊನ್ನಾವರದಲ್ಲಿ ಇಂದು ಆರ್ ವಿ ದೇಶಪಾಂಡೆ