ಕುಮಟಾ: ರಾಷ್ಟ್ರೀಯ ಚುನಾವಣಾ ಆಯೋಗ 2025- 26ರಲ್ಲಿ ಆಯೋಜಿಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಡಾ.ಎ. ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸುಮೇಧಾ ಗಾಂವ್ಕರ್ ಪ್ರಥಮ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.


ಬೆಂಗಳೂರಿನ ಪುಟ್ಟಣ್ಣ ಶೆಟ್ಟಿ ಪುರಭವನದಲ್ಲಿ ನಡೆದ 16ನೇ ರಾಷ್ಟ್ರೀಯ ಮತದಾರ ದಿನದ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ರಾಜ್ಯದ ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ಅವರಿಂದ ಪ್ರಶಸ್ತಿ ಪಡೆದರು. ಇದೆ ವೇಳೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಅನ್ಬು ಕುಮಾರ್ ಅವರಿಂದ ಸನ್ಮಾನವನ್ನು ಸ್ವೀಕರಿಸಿದ್ದಾರೆ. ಇವರ ಸಾಧನೆಗೆ ಕೆನರಾ ಕಾಲೇಜು ಸೊಸೈಟಿಯ ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

More Stories
ಉತ್ತರ ಕನ್ನಡದ 4 ಸರ್ಕಾರಿ ಪ್ರೌಢಶಾಲೆಗಳಿಗೆ ಸಂಸ್ಕೃತ ಶಿಕ್ಷಕರ ಹುದ್ದೆ ಮಂಜೂರಾತಿ: ಕರ್ನಾಟಕ ಸಂಸ್ಕೃತ ಪರಿಷತ್ ಅಭಿನಂದನೆ
ಹಿರೇಗುತ್ತಿ ಹೈಸ್ಕೂಲ್ನಲ್ಲಿ ಶಾಲಾ ಸಂಸತ್ತು ಚುನಾವಣೆ ಹಾಗೂ ಮಂತ್ರಿಮಂಡಲ ರಚನೆ
ಬರ್ಗಿ ಪ್ರೌಢ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ: ನಿತ್ಯ ಯೋಗಕ್ಕೆ ಶಾರದಾ ನಾಯ್ಕ ಕರೆ