ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮೀಜಿ ಭೇಟಿ
ಭಟ್ಕಳ:ತಾಲೂಕಿನ ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಧಂತ್ಯುತ್ಸವ ಹಾಗೂ ರಥೋತ್ಸವದ ಅಂಗವಾಗಿ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮೀಜಿ ಅವರು ಆಗಮಿಸಿದರು. ದೇವಸ್ಥಾನಕ್ಕೆ ಬಂದ ಶ್ರೀಗಳಿಗೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ಶ್ರೀಗಳು ಗಣಪತಿ ಹಾಗೂ ಶ್ರೀ ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆದರು. ಬಳಿಕ ದೇವಸ್ಥಾನದ ಮೊಕ್ತೇಸರ ಉಮೇಶ ಹೆಗಡೆ ಗುಡೇಕೇರಿ ದಂಪತಿಗಳು ಸ್ವಾಗತ ಧೂಳಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಅರ್ಚಕ ವೆ.ಮೂ. ಬಾಲಚಂದ್ರ ಭಟ್ಟ, ದೇವಿಮನೆ ಆಡಳಿತ ಮಂಡಳಿ ಅಧ್ಯಕ್ಷ ವಿನಾಯಕ ಭಟ್ಟ ಬೆಟ್ಕೂರು, ಭವತಾರಿಣಿ ಸೀಮಾ ಪರಿಷತ್ ಅಧ್ಯಕ್ಷ ವಿಘ್ನೇಶ್ವರ ಉಪಾಧ್ಯಾಯ, ಕಾರ್ಯದರ್ಶಿ ವಿನಾಯಕ ಭಟ್ಟ ತೆಕ್ನಗದ್ದೆ ಸೇರಿದಂತೆ ಎಂ.ಎಂ. ಹೆಬ್ಬಾರ, ಶಿವಾನಂದ ಹೆಬ್ಬಾರ, ನಾರಾಯಣ ಹೆಬ್ಬಾರ ಬೆಣಂದೂರು, ಶ್ರೀನಿವಾಸ ಹೆಗಡೆ, ಗಣೇಶ ಹೆಬ್ಬಾರ, ಗಣಪಯ್ಯ ಹೆಗಡೆ, ಎಂ.ವಿ. ಭಟ್ಟ, ಅಶೋಕ ಭಟ್ಟ, ಪರಮೇಶ್ವರ ಭಟ್ಟ, ಮಂಜುನಾಥ ಹೆಬ್ಬಾರ, ನಾರಾಯಣ ಹೆಬ್ಬಾರ ಮುಂತಾದವರು ಉಪಸ್ಥಿತರಿದ್ದರು. ಸಂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ಮಧ್ಯಾಹ್ನ ಭವತಾರಿಣಿ ವಲಯದ ಮಾತೆಯರಿಂದ ಭಜನೆ ನಡೆಯಿತು. ರಾತ್ರಿ ಭರತನಾಟ್ಯ ಕಾರ್ಯಕ್ರಮ ಜರುಗಿತು. ಇಂದು ರಥೋತ್ಸವ ಹಾಗೂ ಶ್ರೀಗಳ ಆಶೀರ್ವಚನ ನಡೆಯಲಿದೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ