ಭಟ್ಕಳ: ರಾಷ್ಟ್ರೀಯ ಹೆದ್ದಾರಿ–66ರ ಭಟ್ಕಳ–ಹೊನ್ನಾವರ ಮಾರ್ಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.
ಮೃತನನ್ನು ಜೊಸೆಪ್ ದಿಯೋಗ ಸೋಜ, ಜನತಾ ಕಾಲೋನಿ, ತೆರ್ನಮಕ್ಕಿ ನಿವಾಸಿ ಎಂದು ಗುರುತಿಸಲಾಗಿದೆ.
ಭಟ್ಕಳದಿಂದ ಮುರ್ಡೇಶ್ವರದ ಕಡೆಗೆ ಸಾಗುತ್ತಿದ್ದ ಶ್ರೀಕುಮಾರ ಬಸ್ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಿಸುತ್ತಿದ್ದ ವೇಳೆ, ಸಭಾತಿ ಕ್ರಾಸ್ನ ಡಿವೈಡರ್ ಸಮೀಪ ತನ್ನ ಮುಂದೆ ಸಾಗುತ್ತಿದ್ದ ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಯಿಂದ ಬೈಕ್ ಸವಾರ ಜೊಸೆಪ್ ಅವರಿಗೆ ತಲೆ, ಮುಖ ಹಾಗೂ ಕೈ–ಕಾಲುಗಳಿಗೆ ಗಂಭೀರ ಗಾಯಗಳಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಸಂಬಂಧ ಜೋನ್ಸನ್ ಪ್ರಾನ್ಸಿಸ್ ಫರ್ನಾಂಡೀಸ್ ಅವರು ಠಾಣೆಗೆ ದೂರು ನೀಡಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವ ಮೂಲದ ಬಸ್ ಚಾಲಕ ಶ್ರೀನಿವಾಸ, ತಂದೆ ಕುಬೇರಪ್ಪ ವಡ್ಡರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ