ಭಟ್ಕಳ ; ತಾಲ್ಲೂಕಿನ ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಧಂತಿ ಮತ್ತು ರಥೋತ್ಸವದ ಕಾರ್ಯಕ್ರಮ ಪ್ರಯುಕ್ತ ಏರ್ಪಡಿಸಲಾದ ಧಾರ್ಮಿಕ ಸಭೆಯಲ್ಲಿ ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮೀಜಿಯವರು ಉದ್ಯಮಿ ಅಶೋಕ ಶಂಕರ ಭಟ್ಟ ಅವರಿಗೆ ಸಾಧಕ ಪ್ರಶಸ್ತಿ ನೀಡಿ ಗೌರವಿಸಿದರು.
ಬೆಂಗಳೂರಿನಲ್ಲಿ ಬಿಸಿನೀರ್ ಇಂಡಿಯಾ ಕಂಪೆನಿ ಮುನ್ನೆಡೆಸುತ್ತಾ ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡು ಗಮನ ಸೆಳೆದಿರುವ ಅಶೋಕ ಭಟ್ಟ ಅವರನ್ನು ಕಿತ್ರೆ ದೇವಿಮನೆ ಆಡಳಿತ ಮಂಡಳಿ ಸಾಧಕ ಪ್ರಶಸ್ತಿಗೆ ಆಯ್ಕೆ ಮಾಡಿತ್ತು. ಅಶೋಕ ಭಟ್ಟರು ದೇವಸ್ಥಾನಗಳ ಜೀರ್ಣೋದ್ಧಾರ, ವಿದ್ಯಾ ಸಂಸ್ಥೆಗೆ, ಅನಾರೋಗ್ಯ ಪೀಡಿತರು ಸೇರಿದಂತೆ ಹಲವು ಕುಟುಂಬಗಳಿಗೆ ನೆರವಾಗಿದ್ದಾರೆ. ಇವರಿಗೆ ಬೆಂಗಳೂರಿನ “ಸಾಗರ ಸಂಗಮ” ಸಂಸ್ಥೆ, ವಿಶ್ವಹವ್ಯಕ ಸಮ್ಮೇಳನದಲ್ಲಿ “ಸ್ಪೂರ್ತಿರತ್ನ” ಪುರಸ್ಕಾರ, ಶ್ರೀರಾಮಚಂದ್ರಾಪುರಮಠ ಗೋಕರ್ಣದ ಅಶೋಕೆಯಲ್ಲಿ “ಸಮಾಜ ಸೇವಾತಿಲಕ” ಪುರಸ್ಕಾರ ಸೇರಿದಂತೆ ಹಲವಾರು ಸಂಘ, ಸಂಸ್ಥೆಗಳು ಪುರಸ್ಕರಿಸಿದ್ದು, ಇದೀಗ ಕಿತ್ರೆ ದೇವಿಮನೆ ಆಡಳಿತ ಮಂಡಳಿ ಸಾಧಕ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರಶಸ್ತಿ ನೀಡುವ ಸಂದರ್ಭದಲ್ಲಿ ಕುಸುಮಾ ಭಟ್ಟ, ದೇವಿಮನೆ ಆಡಳಿತ ಸಮಿತಿ ಅಧ್ಯಕ್ಷ ವಿನಾಯಕ ಭಟ್ಟ ಬೆಟ್ಕೂರು, ಬಾಲಚಂದ್ರ ಹೆಬ್ಬಾರ ಇದ್ದರು.
About The Author


More Stories
ರೈತರ ಕೃಷಿ ರಸ್ತೆಗೆ ಅಡ್ಡಿ ಆರೋಪ: ತಹಶೀಲ್ದಾರ್ ಕಚೇರಿಗೆ ಮನವಿ
ಅಧಿಕಾರ ಸ್ವೀಕರಿಸಿದ 24 ಗಂಟೆಯಲ್ಲೇ ಅಕ್ರಮ ಮರಳು ಸಾಗಾಟಕ್ಕೆ ಬಿಸಿ ಮುಟ್ಟಿಸಿದ ಎಎಸ್ಪಿ ರಾನು ಗುಪ್ತ: 6 ಟಿಪ್ಪರ್ಗಳು, 6 ಮಂದಿ ವಶಕ್ಕೆ
ವಿಧಾನಸಭೆ ಉಪಸಭಾಧ್ಯಕ್ಷ ಮಂಕಾಳ ವೈದ್ಯರಿಗೆ ಕೆಡಿಸಿಸಿ ಬ್ಯಾಂಕ್ ನೌಕರರಿಂದ ಸನ್ಮಾನ