ಭಟ್ಕಳ: ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ “ನಾಯಕತ್ವ ದಿನ” ಹಾಗೂ ಸ್ಪರ್ಧಾ ವಿಜೇತರಿಗೆ “ಬಹುಮಾನ ವಿತರಣಾ” ಕಾರ್ಯಕ್ರಮ ರೋಶನಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕೆ.ಪಿ.ಎಸ್. ಬೈಲೂರು ಶಾಲೆಯ ಮುಖ್ಯೋಪಾಧ್ಯಾಯಿನಿ ಸುಜಾತಾ ಹೊರಟ ಅವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬೀನಾ ವೈದ್ಯ ಎಜ್ಯುಕೇಶನ್ ಟ್ರಸ್ಟ್ನ ವ್ಯವಸ್ಥಾಪಕ ನಿರ್ದೇಶಕಿ ಪುಷ್ಪಲತಾ ಮಂಕಾಳ ವೈದ್ಯ ಅವರು ಮಾತನಾಡಿ ನಾಯಕತ್ವ ಗುಣವನ್ನು ಬಾಲ್ಯದಿಂದಲೇ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಳು ಇಂದು ಎಲ್ಲಾ ರೀತಿಯ ಸೌಲಭ್ಯಗಳನ್ನು ಹೊಂದಿರುವುದರಿAದ ನಾಯಕತ್ವವನ್ನು ಬೆಳೆಸಿಕೊಳ್ಳುವ ಕುರಿತು ಹೆಚ್ಚಿನ ಗಮನ ನೀಡಬೇಕು ಎಂದು ಕರೆ ನೀಡಿದರು. ಉತ್ತಮ ಶಿಕ್ಷಣ ಪಡೆದು ಮುಂದೆ ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಗಳಾಗಿ ರೂಪುಗೊಳ್ಳುವಂತೆಯೂ ಅವರು ಸಲಹೆ ನೀಡಿದರು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಬಹುಮಾನ ವಿತರಣೆ ಮಾಡಿ ಮಾತನಾಡಿದ ಉತ್ತರ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಜಿಲ್ಲಾಧ್ಯಕ್ಷ ರಾಧಾಕೃಷ್ಣ ಭಟ್ಟ ಅವರು ಸ್ಪರ್ಧೆಯಲ್ಲಿ ಸೋಲು ಗೆಲುವು ಸಾಮಾನ್ಯ. ಇಂದು ಸೋತರೆ ಮುಂದೆ ಗೆಲುವಿಗೆ ಒಂದು ಅವಕಾಶವಿರುತ್ತದೆ. ಸೋಲನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ಸ್ಪರ್ಧೆಯಲ್ಲಿ ಗೆಲ್ಲುತ್ತೇನೆ ಎನ್ನುವ ಛಲವನ್ನು ಹೊಂದಿದಾಗ ಗೆಲುವು ಸುಲಭವಾಗುವುದು ಎಂದರು.
ಶಿಕ್ಷಣದಲ್ಲಿಯೂ ಕೂಡಾ ವಿದ್ಯಾರ್ಥಿಗಳು ಸತತ ಓದು, ನಿರಂತರ ಪ್ರಯತ್ನದ ಮೂಲಕ ಯಶಸ್ಸನ್ನು ಗಳಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಯೀಮ್ ಘೋರಿ, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ. ಮೊಗೇರ, ಪ್ರಾಂಶುಪಾಲೆ ವಿದ್ಯಾ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ