ಭಟ್ಕಳ : ಕಾರ್ಯನಿರತ ಪತ್ರಕರ್ತರ ಧ್ವನಿ(ರಿ ) ಬೆಂಗಳೂರು ಹಾಗೂ ಭಟ್ಕಳ ತಾಲೂಕು ಘಟಕದ ಸಹಯೋಗದಲ್ಲಿ ಇಲ್ಲಿನ ನಾಗಯಕ್ಷೆ ಸಭಾಭವನದಲ್ಲಿ ನಡೆದ ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗಂಗಾಧರ ನಾಯ್ಕ ಹಾಗೂ ಶ್ರೀಧರ್ ಶೇಟ್ ಅವರಿಗೆ ಕರ್ನಾಟಕ ಸಾಧಕ ಶ್ರೇಷ್ಠ ರತ್ನ ಪ್ರಶಸ್ತಿ ಪ್ರಧಾನಿಸಲಾಯಿತು.
ಗಂಗಾಧರ್ ನಾಯ್ಕ ಅವರು ಸಾಹಿತ್ಯ ಸಂಗೀತ ಸಂಘಟನೆಯಲ್ಲಿ ತೊಡಗಿಸಿಕೊಂಡು ಬಂದಿದ್ದು ಕನ್ನಡ ಸಾಹಿತ್ಯ ಪರಿಷತ್ತಿನ ಭಟ್ಕಳ ತಾಲೂಕು ಘಟಕಕ್ಕೆ ಎರಡನೆಯ ಬಾರಿ ಅಧ್ಯಕ್ಷರಾಗಿದ್ದು ಪರಿಷತ್ತನ್ನು ತಾಲೂಕಿನ ಮನೆ ಮನಗಳಿಗೆ ತಲುಪಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಮೂಲಕ ಜಿಲ್ಲೆಯಲ್ಲಿಯೇ ಅತ್ಯಂತ ಹೆಚ್ಚು ಕಾರ್ಯಕ್ರಮ ಸಂಘಟಿಸಿ ‘ಸಾಹಿತ್ಯ ಸಾರಥ್ಯ’ ಪ್ರಶಸ್ತಿ ಪಡೆದಿದ್ದಾರೆ. ಸಾಹಿತಿಯಾಗಿಯೂ ಭಾನುಭಾವ ಎಂಬ ಹನಿಗವಿತೆಗಳ ಸಂಕಲನ, ನಮ್ಮ ಆಚರಣೆ ರೂಡಿ ಸಂಪ್ರದಾಯಗಳ ಹಿಂದಿನ ವೈಚಾರಿಕ ಚಿಂತನೆಗಳ ಕುರಿತ ‘ಆಚಾರ ಸುವಿಚಾರ’ ಎಂಬ ಕೃತಿಗಳನ್ನು ಲೋಕಾರ್ಪಣೆ ಮಾಡಿದ್ದಾರೆ. ಗಾಯನ ಕ್ಷೇತ್ರದಲ್ಲೂ ಗುರುತಿಸಿಕೊಂಡಿರುವ ಗಂಗಾಧರ ನಾಯ್ಕ ಭಟ್ಕಳ ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿ ಈ ಟಿವಿ ಎದೆ ತುಂಬಿ ಹಾಡುವೆನು ಕಾರ್ಯಕ್ರಮದಲ್ಲಿ ಹಾಡಿ ಎಸ್. ಪಿ. ಬಾಲಸುಬ್ರಮಣ್ಯo ಅವರಿಂದ ಪ್ರಶಂಸೆ ಪಡೆದವರು.
ನಿರೂಪಕ, ಉಪನ್ಯಾಸಕ, ಸಂಘಟಕ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಬಹುಮುಖ ಪ್ರತಿಭೆಯ ಗಂಗಾಧರ ನಾಯ್ಕ ಅವರಿಗೆ ಕಾರ್ಯ ನಿರತ ಪತ್ರಕರ್ತರ
ಧ್ವನಿ (ರಿ) ಬೆಂಗಳೂರು ಇವರು ಕರ್ನಾಟಕ ಸಾಧಕ ಶ್ರೇಷ್ಠ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಶ್ರೀಧರ್ ಶೇಟ್ ಅವರು ಶಿಕ್ಷಕರಾಗಿ, ಸಾಹಿತಿ, ವ್ಯಂಗ್ಯ ಚಿತ್ರಕಾರ, ಚಿತ್ರಕಲಾವಿದ, ನಿರೂಪಕರಾಗಿ ಬಹುಮುಖ ಪ್ರತಿಭೆಯಿಂದ ಗುರುತಿಸಿಕೊಂಡಿದ್ದಾರೆ. ಉತ್ತಮ ಶಿಕ್ಷಕರರಾಗಿ, ಸಂಪನ್ಮೂಲ ವ್ಯಕ್ತಿಯಾಗಿ 2025ನೇ ಸಾಲಿನ ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ.
ಇವರ ಬೇಲಿಯ ಹೂವು ಕವಿತೆ ಐ ಸಿ ಎಸ್ ಸಿ ಪಠ್ಯಕ್ರಮದ 5ನೇ ತರಗತಿಯ ಕನ್ನಡ ಚಂದನ ಪಠ್ಯಪುಸ್ತಕದಲ್ಲಿ ಅಳವಡಿಸಲಾಗಿದೆ.
ಸಾಹಿತ್ಯ ಕ್ಷೇತ್ರದಲ್ಲಿ ಧ್ವನಿಪೂರ್ಣ ಮತ್ತು ಗಟ್ಟಿತನದ ಕವಿಯಾಗಿ ನಾಡಿನಲ್ಲಿ ಗುರುತಿಸಿಕೊಂಡಿದ್ದಾರೆ. ಸಾಹಿತ್ಯ ಕ್ಷೇತ್ರದ ಸಾಧನೆಗೆ ಭಟ್ಕಳ ತಾಲೂಕಾ ಒಂಭತ್ತನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯ ಗೌರವ ಪಡೆದಿದ್ದಾರೆ. ಇವರ ಬಹುಮುಖ ಕೊಡುಗೆಯನ್ನು ಗಮನಿಸಿ ಕಾರ್ಯ ನಿರತ ಪತ್ರಕರ್ತರ ಧ್ವನಿ (ರಿ) ಬೆಂಗಳೂರು ಇವರು ಕರ್ನಾಟಕ ಸರ್ಕಾರಿ ಸೇವಾ ಶ್ರೇಷ್ಠ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀ ಕ್ಷೇತ್ರ ಬಂಗಾರ ಮಕ್ಕಿಯ ಧರ್ಮಧಿಕಾರಿ ಮಾರುತಿ ಗುರೂಜಿಯವರು ಮಾಜಿ ಸಚಿವ ಶ ಶಿವಾನಂದ ನಾಯಕ್ ಅವರು, ಟಿಎಸ್ಆರ್ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಗಂಗಾಧರ್ ಮೊದಲಿಯಾರ್, ಉದ್ಯಮಿ ಗೋವಿಂದ ಬಾಬು ಪೂಜಾರಿ ಕಾರ್ಯನಿರತ ಪತ್ರಕರ್ತ ಧ್ವನಿ ಬೆಂಗಳೂರು ಇದರ ರಾಜ್ಯಾದ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ, ಜಿಲ್ಲಾಧ್ಯಕ್ಷ ತಾಲೂಕಾಧ್ಯಕ್ಷ ಶಂಕರ್ ನಾಯ್ಕ, ತಂಜಿಮ್ ಸಂಸ್ಥೆಯ ಅಧ್ಯಕ್ಷ ಇನಾಯತುಲ್ಲ ಶಾಬಂದ್ರಿ, ಖ್ಯಾತ ನ್ಯಾಯವಾದಿ ರವಿಕಿರಣ್ ಮುರುಡೇಶ್ವರ, ಕರಾವಳಿ ಕರ್ನಾಟಕ ವಿಭಾಗ ಅಧ್ಯಕ್ಷ ಕುಮಾರ್ ನಾಯ್ಕ ,
ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಪತ್ರಕರ್ತರು ಉಪಸ್ಥಿತರಿದ್ದರು.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ