ಭಟ್ಕಳ: ತಾಲ್ಲೂಕಿನ ಶ್ರೀ ಚನ್ನಪಟ್ಟಣ ಹನುಮಂತ ದೇವಸ್ಥಾನದ ಸಭಾಭವನದಲ್ಲಿ ಭಾರತೀಯ ಜನತಾ ಪಾರ್ಟಿ ಭಟ್ಕಳ ಮಂಡಲದ ವತಿಯಿಂದ VB-G RAM-G ಕುರಿತು ಸಮಾವೇಶ ನಡೆಯಿತು. ಸಮಾವೇಶವನ್ನು ಭಟ್ಕಳದ ಮಾಜಿ ಶಾಸಕ ಸುನಿಲ್ ನಾಯ್ಕ ಅವರು ಉದ್ಘಾಟಿಸಿ ಮಾತನಾಡಿದರು.
ಪಕ್ಷದ ಸಂಘಟನೆಯನ್ನು ಬಲಪಡಿಸುವುದು, ಕಾರ್ಯಕರ್ತರ ಸಕ್ರಿಯ ಪಾತ್ರ ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ಜನತೆಗೆ ತಲುಪಿಸುವಲ್ಲಿ ಕಾರ್ಯಕರ್ತರು ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷ ಲಕ್ಷ್ಮಿ ನಾರಾಯಣ್ ನಾಯ್ಕ, ಪಶ್ಚಿಮ ಘಟ್ಟ ಕಾರ್ಯಪಡೆ ನಿಗಮದ ಮಾಜಿ ಅಧ್ಯಕ್ಷ ಗೋವಿಂದ್ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ನಾಯ್ಕ್, ಮಂಡಲ ಪ್ರಭಾರಿ ಹೇಮಂತ್ ಗಾವಂಕರ್, ಜಿಲ್ಲಾ ಕಾರ್ಯದರ್ಶಿ ಸುಬ್ರಾಯ ದೇವಾಡಿಗ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತರಾಮ್, ರಾಜ್ಯ ಹಿಂದುಳಿದ ಮೋರ್ಚಾ ಕಾರ್ಯಕಾರಣಿ ಸದಸ್ಯ ರವಿ ನಾಯ್ಕ್ (ಜಾಲಿ), ಜಿಲ್ಲಾ ಗ್ರಾಮೀಣ ಹಾಗೂ ಪಂಚಾಯತ್ ರಾಜ್ ಪ್ರಕೋಷ್ಟದ ಸಹ ಸಂಚಾಲಕ ಮೋಹನ್ ನಾಯ್ಕ್, ಮಂಡಲ ಪ್ರಧಾನ ಕಾರ್ಯದರ್ಶಿಗಳು ಶ್ರೀನಿವಾಸ್ ನಾಯ್ಕ್ ಹಾಗೂ ಶ್ರೀಧರ್ ನಾಯ್ಕ್ ಸೇರಿದಂತೆ ಮಂಡಲ, ಮೋರ್ಚಾ ಹಾಗೂ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಪಾರ ಸಂಖ್ಯೆಯ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಿದ್ದರು.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ