ಭಟ್ಕಳ: ಭಟ್ಕಳ ಪೊಲೀಸ್ ಮೈದಾನದಲ್ಲಿ ನಡೆದ ಭಟ್ಕಳ ಟೀಚರ್ಸ್ ಪ್ರೀಮಿಯರ್ ಲೀಗ್ (ಟಿಪಿಎಲ್) ಕ್ರಿಕೆಟ್ ಪಂದ್ಯಾವಳಿಯಲ್ಲಿ ಮನವಿ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಹರಿಶೋಭಿತ ತಂಡ ರನ್ನರ್‌ಅಪ್ ಸ್ಥಾನ ಪಡೆದುಕೊಂಡಿತು.

ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗಾಗಿ ಐಪಿಎಲ್ ಮಾದರಿಯಲ್ಲಿ ಆಯೋಜಿಸಿದ್ದ ಈ ಟಿಪಿಎಲ್ ಪಂದ್ಯಾವಳಿಯಲ್ಲಿ ಹರಿಶೋಭಿತ, ಮನವಿ, ವಿದ್ಯಾಶ್ರೀ ಹಾಗೂ ಗುರುಜಿ ಎಂಬ ನಾಲ್ಕು ತಂಡಗಳು ಭಾಗವಹಿಸಿದ್ದವು. ಶಿಕ್ಷಕರಲ್ಲಿ ಕ್ರೀಡಾಸಕ್ತಿಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಪಂದ್ಯಾವಳಿಯನ್ನು ಭಟ್ಕಳ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿತ್ತು.
ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ್, ಶಿಕ್ಷಕರು ದಿನನಿತ್ಯದ ಕೆಲಸದ ಒತ್ತಡವನ್ನು ಮರೆತು ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸುತ್ತಿರುವುದು ಅಭಿನಂದನಾರ್ಹ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಪ್ರೌಢಶಾಲಾ ಶಿಕ್ಷಕ ಶ್ರೀಧರ್ ಶೇಟ್, ಭಟ್ಕಳ ತಾಲೂಕು ನೌಕರರ ಸಂಘದ ಅಧ್ಯಕ್ಷ ಎಂ.ಎನ್. ನಾಯ್ಕ್, ಕಾರ್ಯದರ್ಶಿ ವೆಂಕಟೇಶ್ ನಾಯ್ಕ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ತಂಡಗಳಿಗೆ ಶುಭಾಶಯ ಕೋರಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಲ್ಲಾಸ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ಎಂ.ಡಿ. ರಫೀಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಜನಾರ್ಧನ ಮೊಗೇರ ನಿರೂಪಿಸಿದರು.
About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ