ಜಾನಪದ ಕಲಾತಂಡಗಳ ವೈಭವದೊಂದಿಗೆ ಅದ್ದೂರಿಯಾಗಿ ನಡೆದ ಕಾಪನಹಳ್ಳಿ ಗವಿಮಠದ ಶ್ರೀ ಸ್ವತಂತ್ರ ಸಿದ್ಧಲಿಂಗೇಶ್ವರರ ಬ್ರಹ್ಮ ರಥೋತ್ಸವ..
ಕೃಷ್ಣರಾಜಪೇಟೆ ತಾಲೂಕಿನ ಶರಣ ಶ್ರದ್ಧಾ ಕೇಂದ್ರವಾದ ಕಾಪನಹಳ್ಳಿ ಗವಿಮಠದ ಶ್ರೀ ಸ್ವತಂತ್ರ ಸಿದ್ಧಲಿಂಗೇಶ್ವರರ ಬ್ರಹ್ಮರಥೋತ್ಸವವು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು.
ಶಾಸಕ ಹೆಚ್.ಟಿ. ಮಂಜು, ಕೆಎಂಎಫ್ ನಿರ್ದೇಶಕ ಅಶೋಕ್, ಮಾಜಿ ಸಿಎಂ ಯಡಿಯೂರಪ್ಪನವರ ಸೋದರಳಿಯ ಸಿಂದಘಟ್ಟ ಅರವಿಂದ್ ಹಾಗೂ ಗವಿಮಠದ ಪೀಠಾಧಿಪತಿಗಳಾದ ಶ್ರೀ ಸ್ವತಂತ್ರ ಚನ್ನವೀರಯ್ಯಸ್ವಾಮಿಜಿ ಅವರು ಕ್ಷೇತ್ರದ ಅದಿದೇವತೆಯಾದ ಮಡುವಿನಮ್ಮ ತಾಯಿಯ ಉತ್ಸವ ಮೂರ್ತಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಶ್ರೀರಥದಲ್ಲಿ ವಿರಾಜಮಾನವಾಗಿದ್ದ ಪವಾಡ ಪುರುಷ, ಶ್ರೀ.ಸ್ವತಂತ್ರ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಮಾಡಿ ರಥೋತ್ಸವಕ್ಕೆ ಚಾಲನೆ ನೀಡಿದರು.
ಗವಿಮಠದ ಪೀಠಾಧಿಪತಿಗಳಾದ ಶ್ರೀ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ ನೆರೆದಿದ್ದ ಭಕ್ತಾದಿಗಳನ್ನು ಉದ್ದೇಶಿಸಿ ಆಶೀರ್ವಚನ ನೀಡಿ ಮಾತನಾಡಿ ಹಬ್ಬ ಹರಿದಿನಗಳು ಜಾತ್ರೆ ಉತ್ಸವಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದೆ ಹಬ್ಬದ ಸಂಭ್ರಮದಲ್ಲಿ ಎಲ್ಲಾ ಜಾತಿ ವರ್ಗಗಳ ಜನರು ಪ್ರೀತಿ-ವಿಶ್ವಾಸದಿಂದ ರಥೋತ್ಸವದಲ್ಲಿ ಭಾಗವಹಿಸಿ ಭಗವಂತನ ದರ್ಶನವನ್ನು ಪಡೆದಾಗ ಸಿಗುವ ಆತ್ಮ ಸಂತೋಷಕ್ಕೆ ಪಾರವೇ ಇಲ್ಲ ಆದ್ದರಿಂದ ಜಾತ್ರೆ ರಥೋತ್ಸವಗಳು ನಮ್ಮ ಸಂಸ್ಕೃತಿಯ ಒಂದು ಭಾಗವಾಗಿ ಇಂದಿಗೂ ಮುಂದುವರಿಯುತ್ತಿವೆ ಎಂದು ಸ್ವಾಮೀಜಿಗಳು ಹೇಳಿದರು.
ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ತೋಟಪ್ಪಶೆಟ್ಟಿ, ವೀರಶೈವ ಸಮಾಜದ ಮುಖಂಡ ಬ್ಯಾಂಕ್ ಪರಮೇಶ್ವರ್, ಕೃಷ್ಣರಾಜಪೇಟೆ ಪಟ್ಟಣದ ಶ್ರೀ ಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ.ಬಿ. ಚಂದ್ರಶೇಖರ್, ಸಮಾಜ ಸೇವಕರು ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರಾದ ವಿ.ಡಿ. ಮೋಹನ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ವಿ.ಡಿ.ಹರೀಶ್ ಸೇರಿದಂತೆ ಸಾವಿರಾರು ಭಕ್ತಾದಿಗಳು ರಥೋತ್ಸವದಲ್ಲಿ ಭಾಗವಹಿಸಿ ಶ್ರೀರಾತದ ಕಳಸಕ್ಕೆ ಹಣ್ಣು ಜವನವನ್ನು ಸಮರ್ಪಿಸಿ ಕೃತರ್ಥರಾದರು. ವರದಿ.ಡಾ. ಕೆ.ಆರ್.ನೀಲಕಂಠ ಕೃಷ್ಣರಾಜಪೇಟೆ ಮಂಡ್ಯ.

More Stories
ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಪ್ರಗತಿ ಉತ್ಸವ-2026
ಉಕ್ಕಡಗಾತ್ರಿಯ ಕರಿಬಸವ ಅಜ್ಜಯ್ಯನ ನೂತನ ದೇವಸ್ಥಾನ ಲೋಕಾರ್ಪಣೆ
ಶ್ರೀ ಪಂಚಭೂತೇಶ್ವರ ಸುಕ್ಷೇತ್ರದಲ್ಲಿ ನಡೆದ ಮಹಾಶಿವರಾತ್ರಿಯ ಅಮಾವಾಸ್ಯೆ ಜಾಗರಣೆ ಕಾರ್ಯಕ್ರಮ