ಭಟ್ಕಳ: ತಾಲೂಕಿನ ಗುಳ್ಳೆ ಪ್ರದೇಶದ ನಿವಾಸಿ ಮಹ್ಮದ್ ನಾಸೀರ್ (33) ರೈಲು ಡಿಕ್ಕಿಯಾಗಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಮೃತ ಮಹ್ಮದ್ ನಾಸೀರ್ ಅವರು ಕಳೆದ ಸುಮಾರು 15 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಕಳೆದ 3–4 ವರ್ಷಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿಕೊಂಡು ಹೊರಗೆ ಹೋದವರು, ಕೊಂಕಣ ರೈಲ್ವೆ ಟನಲ್ ಸಮೀಪ ಹಾದು ಹೋಗುತ್ತಿದ್ದ ರೈಲಿಗೆ ಡಿಕ್ಕಿಯಾಗಿದ್ದಾರೆ.
ಅಪಘಾತದಲ್ಲಿ ತಲೆ, ಎಡ ಕಣ್ಣು ಹಾಗೂ ಕೈ–ಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಮೃತನ ಅಣ್ಣ ನಚೀಲ್ ಶೇಖ್ ಅವರು ಭಟ್ಕಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ