ಮುರ್ಡೇಶ್ವರ ; ಸಮಾರಂಭಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕರಾವಳಿ ಪ್ರೌಢಶಾಲೆ ಗುಣವಂತೆಯ ಶಿಕ್ಷಕರಾದ ಶ್ರೀಯುತ ಪಿ.ಜಿ.ಲಿಂಗೋಜಿ ಅವರು ಆಗಮಿಸಿದ್ದರು. ಇವರು ವಾರ್ಷಿಕ ಪರೀಕ್ಷೆಗೆ ಸನಿಹದಲ್ಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಗೂ ಮುಂದಿನ ಭವಿಷ್ಯಕ್ಕೆ ಸಂಬಂಧಪಟ್ಟಂತೆ ಪ್ರೇರಣಾದಾಯಕ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಅಶ್ವಿನಿ ಶೇಟ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಥಮ ವರ್ಷದ ವಿದ್ಯಾರ್ಥಿಗಳು ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

More Stories
ಮುರುಡೇಶ್ವರ ಪಾಲಿಟೆಕ್ನಿಕ್ ನಲ್ಲಿ ಒಂದು ದಿನದ ಇನ್ಕುಬೇಷನ್ ಜಾಗೃತಿ ಕಾರ್ಯಕ್ರಮ
ಮುರ್ಡೇಶ್ವರದಲ್ಲಿ ಲಾಡ್ಜ್ ಮೇಲೆ ಪೊಲೀಸ್ ದಾಳಿ: ಇಬ್ಬರು ಮಹಿಳೆಯರ ರಕ್ಷಣೆ, ರೂಮ್ ಬಾಯ್ ಬಂಧನ
ಮುರುಡೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಸಂಭ್ರಮ ಸಾವಿರಾರು ಭಕ್ತರ ದಂಡು – ಕಳೆದುಕೊಂಡವರನ್ನು ಪತ್ತೆ ಹಚ್ಚಿದ ಪೊಲೀಸರು