March 4, 2026

ರಜತ್ ಆರ್. ನಾಯ್ಕ ಹಾಗೂ ಶಿಕ್ಷಕರಾದ ಶ್ರೀ ಚನ್ನವೀರಪ್ಪ ಆರ್ ರಾಜ್ಯ ಮಟ್ಟಕ್ಕೆ

ಭಟ್ಕಳ :ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಧಾರವಾಡ ಬೆಳಗಾವಿ ವಿಭಾಗ ಮಟ್ಟದ ಪ್ರೌಢ ಶಾಲಾ ಮಕ್ಕಳ ಹಾಗೂ ಚಿತ್ರಕಲಾ ಶಿಕ್ಷಕರ ಚಿತ್ರಕಲಾ ಸ್ಪರ್ಧೆ 2025-26 ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಚಿತ್ರಕಲಾ ಶಿಕ್ಷಕರಿಗೆ ವಿಭಾಗ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ದಿನಾಂಕ – 24-01-2026 ರಂದು ಪ್ರಾರ್ಥನಾ ಮಂದಿರ ಡಯಟ್ ಧಾರವಾಡದಲ್ಲಿ ಏರ್ಪಡಿಸಲಾಗಿತ್ತು.


ಈ ಸ್ಪರ್ಧೆಯಲ್ಲಿ ಭಟ್ಕಳ ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೈಲೂರು ಈ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಕುಮಾರ ರಜತ್ ಆರ್. ನಾಯ್ಕ ಹಾಗೂ ಈ ಶಾಲೆಯ ಚಿತ್ರಕಲಾ ಶಿಕ್ಷಕರಾದ ಶ್ರೀ ಚನ್ನವೀರಪ್ಪ ಆರ್. ಪೂಜಾರಿಯವರು ಈ ಸ್ಪರ್ಧೆಯಲ್ಲಿ ಸ್ಪರ್ಧಿಸಿ ವಿಜೇತರಾಗಿ “ಗುರುಶಿಷ್ಯ” ಇಬ್ಬರೂ ಕೂಡ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಎಸ್.ಡಿ.ಎಮ್.ಸಿ ವತಿಯಿಂದ ಹೃದಯಸ್ಪರ್ಶಿಯಾಗಿ ಅಭಿನಂದಿಸಿರುತ್ತಾರೆ.

About The Author

error: Content is protected !!