ಬೈ0ದೂರು: ಸುರಭಿ (ರಿ.) ಬೈಂದೂರು ಸಾಂಸ್ಕೃತಿಕ, ಸಾಹಿತ್ಯ,ಸೇವಾ ಪ್ರತಿಷ್ಠಾನ ಇದರ 26ನೇ ವರ್ಷದ ಅಂಗವಾಗಿ ದಿ.ಹೊಸಾಡು
ಸುಬ್ರಾಯ ಶೇರುಗಾರ್ ಸಂಸ್ಮರಣಿಯ ಸಾಂಸ್ಕೃತಿಕೋತ್ಸವದ ಪ್ರಯುಕ್ತ ಫೆ.19 ರಿಂದ 22 ರ ತನಕ ನಾಲ್ಕು ದಿನಗಳ ಕಾಲ ಸುರಭಿ ಜೈಸಿರಿ -2026 ಬಿಂದುಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ಸಂಜೆ 6 ಗಂಟೆಗೆ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆಯಲಿದೆ ಎಂದು ಸುರಭಿ ಸಂಸ್ಥೆಯ ಅಧ್ಯಕ್ಷ ಆನಂದ ಮದ್ದೋಡಿ ತಿಳಿಸಿದ್ದಾರೆ.
ಅವರು ಶನಿವಾರ ಬೈಂದೂರು ರೋಟರಿ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ನಮ್ಮ ಸಂಸ್ಥೆ ಕಳೆದ 26 ವರ್ಷಗಳಿಂದ ವಿವಿಧ ಸಾಂಸ್ಕೃತಿಕ, ಸಾಹಿತಿಕ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ನಡೆಸಿಸುತ್ತಿದೆ. ರಾಜ್ಯಮಟ್ಟದ ನಾಟಕಗಳು ಆಯೋಜಿಸಿದ್ದು ಸುರಭಿ ಜೈಸಿರಿ ಮತ್ತು ಬಿಂದುಶ್ರೀ ಪ್ರಶಸ್ತಿ ಪ್ರಧಾನ ಹಾಗೂ ಸಾಂಸ್ಕೃತಿಕ ಉತ್ಸವಗಳನ್ನು ಆಯೋಜಿಸುವ ಮೂಲಕ ಬೈಂದೂರನ್ನು ಸಾಂಸ್ಕೃತಿಕ ನಗರಿಯನ್ನಾಗಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.
ಫೆ.19 ರಂದು ಗುರುವಾರ ಸಂಜೆ 6 ಗಂಟೆಗೆ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಸುರಭಿ ಜೈಸಿರಿ -2026 ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಪ್ಪುಂದ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ ಹಾಗೂ ಮುಂತಾದ ಗಣ್ಯರು ಆಗಮಿಸಲಿದ್ದಾರೆ. ಡಾ.ಶಿವರಾಮ ಕಾರಂತ ಬಾಲ ಪ್ರಶಸ್ತಿ ಪುರಸ್ಕೃತೆ ಕು.ಕೃತಿಕಾ ಕೃಷ್ಣ ಗಾಣಿಗ ರವರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ ಹಾಗೂ ಸಭಾ ಕಾರ್ಯಕ್ರಮದ ಬಳಿಕ ಸುರಭಿಯ ಬಾಲ ಕಲಾವಿದರಿಂದ ಕನಕಾಂಗಿ ಕಲ್ಯಾಣ ಹಾಗೂ ಸುರಭಿಯ ಯಕ್ಷ ಕಲಾವಿದರಿಂದ ಧರ್ಮಾಂಗದ ದಿಗ್ವಿಜಯ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಫೆ.20 ರಂದು ಸಂಜೆ ಸಭಾ ಕಾರ್ಯಕ್ರಮದಲ್ಲಿ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಲಿದ್ದಾರೆ.ರಂಗ ಭೂಮಿ ಹಾಗೂ ಹಿರಿಯ ಚಲನಚಿತ್ರ ನಟಿ ಉಮಾಶ್ರೀ ಯವರಿಗೆ 2026 ನೇ ಸಾಲಿನ ಸುರಭಿ ಬಿಂದುಶ್ರೀ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಹಾಗೂ ಮುಂತಾದ ಗಣ್ಯರು ಉಪಸ್ಥಿತರಿರಲಿದ್ದಾರೆ.ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕರ್ನಾಟಕ ಕಲಾಶ್ರೀ ವಿದ್ವಾನ್ ಚಂದ್ರಶೇಖರ ನಾವಡ ಸುರತ್ಕಲ್ ಇವರಿಗೆ ಗುರುವಂದನೆ ನೀಡಿ ಗೌರವಸಲಿದ್ದಾರೆ.ಸಭಾ ಕಾರ್ಯಕ್ರಮದ ಬಳಿಕ ಸುರಭಿಯ ಭರತನಾಟ್ಯ ಕಲಾವಿದರಿಂದ ಶ್ರೀ ಕೃಷ್ಣ ಲೀಲಾಮೃತಮ್ ಪ್ರದರ್ಶನಗೊಳ್ಳಲಿದೆ.
ಫೆ.21 ರಂದು ಸಂಜೆ ಸಭಾ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಡಾ.ಎಂ.ವೀರಪ್ಪ ಮೊಯಿಲಿ ಸಂಸ್ಮರಣಾ ನುಡಿಗಳನ್ನಾಡಲಿದ್ದಾರೆ. ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ.ಪ್ರಭಾಕರ ಹೆಚ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವರಾದ ಕೃಷ್ಣ ಪಾಲೇಮಾರ್ ಶುಭಸಂಸನೆಗೈಯಲಿದ್ದಾರೆ.ಬೈAದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಆಶಯ ನುಡಿಗಳನ್ನಾಡಲಿದ್ದಾರೆ ಮುಂತಾದ ಗಣ್ಯರು ಉಪಸ್ಥಿತರಿರಲಿದ್ದಾರೆ ಹಾಗೂ ಡಾ.ಶಿವರಾಮ ಕಾರಂತ ಬಾಲ ಪ್ರಶಸ್ತಿ ಪುರಸ್ಕೃತೆ ಕು.ತ್ರಿಷಾ ಇವರಿಗೆ ಗೌರವಾರ್ಪಣೆ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಸುರಭಿಯ ನೃತ್ಯ ಕಲಾವಿದರಿಂದ ಜಾನಪದ, ನಾಟ್ಯ, ವೈಭವ ನಡೆಯಲಿದೆ ಹಾಗೂ ಪ್ರಸಿದ್ಧ ಹಾಸ್ಯ ಕಲಾವಿದರಾದ ಪ್ರೋ.ಕೃಷ್ಣಗೌಡ ಮತ್ತು ತಂಡದವರಿAದ ಹಾಸ್ತೋತ್ಸವ ಕಾರ್ಯಕ್ರಮ ನಡೆಯಲಿದೆ.
ಫೆ.22 ರಂದು ಸಮಾರೋಪ ಸಮಾರಂಭದ ಅಂಗವಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಳರ್ ಮುಖ್ಯ ಅತಿಥಿಗಳಾಗಿ ಆಗಮಿಲಿದ್ದಾರೆ.ಮಾಜಿ ಸಚಿವರಾದ ರಮಾನಾಥ ರೈ ಸಮಾರೋಪ ನುಡಿಗಳನ್ನಾಡಲಿದ್ದಾರೆ ಹಾಗೂ ಮುಂತಾದ ಗಣ್ಯರು ಉಪಸ್ಥಿತರಿರಲಿದ್ದಾರೆ ಹಾಗೂ ಡಾ.ಶಿವರಾಮ ಕಾರಂತ ಬಾಲ ಪ್ರಶಸ್ತಿ ಪುರಸ್ಕೃತೆ ಕು.ದೀಪ್ತಾ ದಿನೇಶ್ ಕುಂದರ್ ರವರಿಗೆ ಗೌರವಾರ್ಪಣೆ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಸುರಭಿ ವಿದ್ಯಾರ್ಥಿಗಳಿಂದ ನಾದಾ ಗಾನಾಮೃತ ಹಾಗೂ ಕುಂಚ ಸಂಭ್ರಮ ನಡೆಯಲಿದೆ. ಬಳಿಕ ಸನಾತನ ನಾಟ್ಯಾಲಯ ಮಂಗಳೂರು ಇವರಿಂದ ಸನಾತನ ರಾಷ್ಟ್ರಾಂಜಲಿ ನಾಟ್ಯ ವೈವಿದ್ಯ ನಡೆಯಲಿದೆ.
ಹಿರಿಯ ಚಲನಚಿತ್ರ ನಟಿ ಉಮಾಶ್ರೀ ಯವರಿಗೆ ಸುರಭಿ ಬಿಂದುಶ್ರೀ ಪ್ರಶಸ್ತಿ ಪ್ರಧಾನ; ತುಮಕೂರು ಜಿಲ್ಲೆಯ ಸೊಣವಿನಕೆರೆಯಲ್ಲಿ 1957 ಮೇ 10 ರಂದು ಜನಿಸಿದ ಇವರು, ಕನ್ನಡ ಚಿತ್ರರಂಗದ ಹಿರಿಯ ನಟಿ ಮತ್ತು ರಂಗಭೂಮಿ ಕಲಾವಿದೆ. 400ಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳಲ್ಲಿ ನಟಿಸಿರುವ ಇವರು ‘ಗುಲಾಜಿ ಟಾಕೀಸ್” ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಳ್ಳು ವುದರೊಂದಿಗೆ 6 ಬಾರಿ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದ ಏಕೈಕ ಕನ್ನಡ ನಟ 1980 ರಲ್ಲಿ ಬಂಗಾರದ ಜಿಂಕೆ ಚಿತ್ರದ ಮೂಲಕ ಸಿನೆಮಾ ರಂಗಕ್ಕೆ ಪಾದರಣೆ ಮಾಡಿದ ಇವರು ಗ್ರಾಮೀಣ ಸೊಗಡಿನ ಪಾತ್ರಗಳಿಂದ ಹೆಸರು ವಾಸಿಯಾಗಿದ್ದಾರೆ ರಂಗಭೂಮಿಯ ಒಳಹೊರಗನ್ನು ಇಲ್ಲ ಇವರು ಬೆಂಗಳೂರಿನ ರಂಗ ಸಂಪದ ಹವ್ಯಾಸಿ ರಂಗ ತಂಡದ ಸದಸ್ಯೆರಾಗಿದ್ದು. ಇವರು ನಟನೆಯೊಂದಿಗೆ ರಾಜಕಾರಣೆಯಾಗಿಯೂ ತಮ್ಮನ್ನು ಗುರುತಿಸಿಕೊಂಡು ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವೆಯಾಗಿ ತಮ್ಮ ಸೇವೆಯನ್ನು ಸಲ್ಲಿಸಿರುತ್ತಾರೆ.ಇವರು ರಂಗಭೂಮಿ ಮತ್ತು ಸಿನಿಮಾ ಕ್ಷೇತ್ರದಲ್ಲಿ ಅಮೋಘ ಸಾಧನೆಗೈದು ಹತ್ತಾರು ಪ್ರತಿಷ್ಠಿತ ಪುರಸ್ಕಾರಗಳಿಂದ ಅಲಂಕೃತರಾಗಿದ್ದಾರೆ. ಇವರ ಈ ಎಲ್ಲಾ ಸಾಧನೆಗಳನ್ನು ಗುರುತಿಸಿ ಇವರಿಗೆ ಸುರಭಿ ಬಿಂದುಶ್ರೀ ಪ್ರಶಸ್ತಿ ಪ್ರಧಾನ ನೀಡಲಾಗುವುದು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ,ಉಪಾಧ್ಯಕ್ಷ ಭಾಸ್ಕರ ಬಾಡ, ಸಂಘಟನಾ ಕಾರ್ಯದರ್ಶಿ ವೆಂಕಟರಮಣ ಜಿ. ಮಯ್ಯಾಡಿ ಉಪಸ್ಥಿತರಿದ್ದರು. ಸುರಭಿ ರಿ. ಬೈಂದೂರು ನಿರ್ದೇಶಕ ಸುಧಾಕರ ಪಿ ಬೈಂದೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ವರದಿ : ಎಚ್ ಸುಶಾಂತ್ ಆಚಾರ್ ಬೈಂದೂರು

More Stories
ಕಂಬದಕೋಣೆ ಗ್ರಾಮ ಪಂಚಾಯತ್ನಲ್ಲಿ ಸುದ್ಧಿಗೋಷ್ಟಿ
ಬೈಂದೂರು : ಅನಿರ್ಧಿಷ್ಟಾವಧಿ ಧರಣಿ 104ನೇ ದಿನಕ್ಕೆ . ಗೆರಟೆ ಹಿಡಿದು ವಿಶೇಷ ಪ್ರತಿಭಟನೆ
ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೈಂದೂರು, ಗೊಳಿಹೊಳೆ ಶಾಖೆಯ ವತಿಯಿಂದ ಸೌಹಾರ್ದ ಸಹಕಾರ ದಿನಾಚರಣೆ