ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಪಾದಚಾರಿಯೊಬ್ಬರು ಗಾಯಗೊಂಡ ಘಟನೆ ನಡೆದಿದೆ.
ಬೈಂದೂರ ಕಡೆಯಿಂದ ಭಟ್ಕಳ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಯಾವುದೋ ವಾಹನವು ಬೆಳಕೆ ಸೊಸೈಟಿ ಸಮೀಪ ಅಪಘಾತಕ್ಕೀಡಾಗಿದೆ. ಬೆಳಕೆ ಕಡೆಯಿಂದ ಸರ್ಪನಕಟ್ಟಾ ಕಡೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಿವರಾಮ ಹನುಮಂತ ನಾಯ್ಕ ಅವರಿಗೆ ವಾಹನ ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ಪರಿಣಾಮ ಗಾಯಾಳುವಿನ ತಲೆಯ ಬಲಭಾಗ, ಬಲಗೈ ಹಾಗೂ ಬಲಗಾಲಿಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಪಘಾತದ ನಂತರ ವಾಹನ ಚಾಲಕನು ವಾಹನವನ್ನು ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದಾನೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾದ ಚಾಲಕನ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ