ವಿದ್ಯಾರ್ಥಿಗಳು ಶಿಕ್ಷಣದ ಜ್ಞಾನದ ಬೆಳಕಿನ ಶಕ್ತಿಯನ್ನು ಪಡೆಯಲು ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಸಾಧನೆ ಮಾಡಬೇಕು ಎಂದು ಶಾಸಕ ಎಚ್ ಟಿ ಮಂಜು ಹೇಳಿದರು.
ಕೃಷ್ಣರಾಜಪೇಟೆ : ಪಟ್ಟಣದ ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಪ್ರಗತಿ ಉತ್ಸವ-2026 ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕಳೆದ 34 ವರ್ಷಗಳಿಂದ ಗುಣಮಟ್ಟದ ಶಿಕ್ಷಣವನ್ನು ನೀಡುವ ಜೊತೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶವನ್ನು ತಂದು ಕೊಡುವ ಮೂಲಕ ಕೃಷ್ಣರಾಜಪೇಟೆ ತಾಲೂಕಿನಲ್ಲಿಯೇ ಮಾದರಿ ಶಿಕ್ಷಣ ಸಂಸ್ಥೆಯಾಗಿ ಹೊರಹೊಮ್ಮಿರುವ ಪ್ರಗತಿ ಪ್ರೌಢಶಾಲೆಯು ಬಡ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಸನಕ್ಕೆ ದಾರಿ ದೀಪವಾಗಿದೆ ಎಂದು ಅಭಿಮಾನದಿಂದ ಹೇಳಿದರು.
ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರಾದ ಡಾಲು ರವಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಆಸಕ್ತಿ ವಹಿಸಿ ಶಾಲೆ ಮತ್ತು ವಿದ್ಯಾರ್ಥಿಗಳ ನಡುವೆ ಸಂಪರ್ಕ ಸೇತುವೆಯಂತೆ ಕೆಲಸ ಮಾಡಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯನ್ನು ಸಂಭ್ರಮಿಸಿ ನಿಮ್ಮ ಮಕ್ಕಳನ್ನು ಸಮಾಜಕ್ಕೆ ಆಸ್ತಿಯಾಗಿ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಸಮಾಜ ಸೇವಕರು ಹಾಗೂ ರಾಜ್ಯ ಆರ್ಟಿಓ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಮಾತನಾಡಿ ಶಿಕ್ಷಣದ ಜ್ಞಾನದ ಬೆಳಕಿನ ಶಕ್ತಿಯು ಸಾಮಾಜಿಕ ಅಸಮಾನತೆಗಳನ್ನು ಹೊಡೆದೋಡಿಸಿ ಸಮ ಸಮಾಜವನ್ನು ನಿರ್ಮಾಣ ಮಾಡಲು ಪ್ರಬಲವಾದ ಅಸ್ತ್ರವಾಗಿದೆ ಮಕ್ಕಳು ಏಕಾಗ್ರತೆ ಹಾಗೂ ಶ್ರದ್ಧಾ ಭಕ್ತಿಯಿಂದ ವ್ಯಾಸಂಗ ಮಾಡಿ ಸಾಧನೆ ಮಾಡುವ ಮೂಲಕ ತಮ್ಮ ತಂದೆ ತಾಯಿಗಳು ಹಾಗೂ ಗುರು ಹಿರಿಯರಿಗೆ ಕೀರ್ತಿ ತರಬೇಕು ಎಂದು ಕಿವಿಮಾತು ಹೇಳಿದರು. ಮೈಸೂರಿನ ಕೆಆರ್ ಎಂಎಸ್ ಸಂಯೋಜಕರಾದ ರಾಜು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಪ್ರಗತಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ಕೆ. ಕಾಳೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಕೈಗಾರಿಕಾ ಸರಬರಾಜು, ಮಾರಾಟ ಸಹಕಾರ ಮಹಾಮಂಡಲದ ಅಧ್ಯಕ್ಷ ಬಸ್ ಸಂತೋಷ್ ಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಹೆಚ್.ಕೆ. ಮಂಜುನಾಥ್, ಹಿರಿಯ ಪತ್ರಕರ್ತರಾದ ಬಳ್ಳೇಕೆರೆ ಮಂಜುನಾಥ್, ಅಗ್ರಹಾರ ಬಾಚಹಳ್ಳಿ ಶ್ರೀನಿವಾಸ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜುನಾಥ, ಪುರಸಭೆ ಮುಖ್ಯ ಅಧಿಕಾರಿಯ ಅಶೋಕ್, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಯತೀಶ್, ಪ್ರಗತಿ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಟಿ ಶೈಲಜಾ ಆಡಳಿತಾಧಿಕಾರಿ ಡಾ.ಎಂ.ಕೆ. ಮೋನಿಕಾ ಮುಖಂಡ ಬಿಸಿಎಸ್ ಕುಮಾರ್, ಮುಖ್ಯ ಶಿಕ್ಷಕ ಗೋಪಾಲಕೃಷ್ಣ ಸೇರಿದಂತೆ ಮಕ್ಕಳ ಪೋಷಕರು ಹಾಗೂ ಸಾರ್ವಜನಿಕರು ಪ್ರಗತಿ ಉತ್ಸವ ಕಾರ್ಯಕ್ರಮದಲ್ಲಿ ಮಕ್ಕಳು ನೀಡಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕರಾಟೆ ಪ್ರದರ್ಶನವನ್ನು ವೀಕ್ಷಿಸಿ ಸಂಭ್ರಮಿಸಿದರು.
ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ, ಮಂಡ್ಯ.

More Stories
ಸೊಳ್ಳೇಪುರ ಹಾಲು ಉತ್ಪಾದಕ ಸಹಕಾರ ಸಂಘ ಕಾಂಗ್ರೆಸ್ ವಷಕ್ಕೆ
ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಪ್ರಗತಿ ಉತ್ಸವ-2026
ಉಕ್ಕಡಗಾತ್ರಿಯ ಕರಿಬಸವ ಅಜ್ಜಯ್ಯನ ನೂತನ ದೇವಸ್ಥಾನ ಲೋಕಾರ್ಪಣೆ