ಕುಮಟಾ:ತಾಲ್ಲೂಕಿನ ಕುಮಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.



ಫೆ. 15ರಂದು ಪಟ್ಟಣದ ಬಸ್ತಿಪೇಟೆ ಸಮೀಪದ ಮನೆಯೊಂದರಲ್ಲಿ, ಮನೆಯ ಸದಸ್ಯರು ನಿದ್ರಿಸುತ್ತಿದ್ದ ವೇಳೆ ಕಳ್ಳತನ ನಡೆದಿದೆ. ಕಿಟಕಿಯಿಂದ ಒಳಗೆ ಕೈ ಹಾಕಿ ಚಿಲಕದ ಕೊಂಡಿ ತೆಗೆಯುವ ಮೂಲಕ ಮನೆಯೊಳಗೆ ಪ್ರವೇಶಿಸಿದ ಕಳ್ಳ, ಕಪಾಟಿನಲ್ಲಿ ಇರಿಸಿದ್ದ ಸುಮಾರು ₹80 ಸಾವಿರ ನಗದು ಹಣವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದನು. ಈ ಕುರಿತು ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮನೆಯಲ್ಲೇ ಜನರಿದ್ದಾಗ ಕಳ್ಳತನ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ನಿರೀಕ್ಷಕ ಯೋಗೇಶ ಕೆ.ಎಂ. ಅವರ ಮಾರ್ಗದರ್ಶನದಲ್ಲಿ ಪಿ.ಎಸ್.ಐ. ಮಯೂರ ಪಟ್ಟಣಶೆಟ್ಟಿ ಹಾಗೂ ಸಿಬ್ಬಂದಿಗಳ ತಂಡ ವಿಶೇಷ ತನಿಖೆ ಕೈಗೊಂಡು ತಾಂತ್ರಿಕ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿತು.
ತನಿಖೆಯ ವೇಳೆ ಸಿಕ್ಕ ಸುಳಿವಿನ ಆಧಾರದ ಮೇಲೆ ಸೊರಬ ತಾಲೂಕು, ಯಡಗೊಪ್ಪ ಗ್ರಾಮದ ನಿವಾಸಿ ಬಸವರಾಜ ಬಸ್ಯಾ ಶಿವಪ್ಪ ಗೌಡನನ್ನು ಬಂಧಿಸಲಾಗಿದೆ. ಆರೋಪಿಯಿಂದ ಕಳವು ಮಾಡಿದ್ದ ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ಶೀಘ್ರ ಪತ್ತೆಹಚ್ಚಿದ ಪೊಲೀಸ್ ತಂಡವನ್ನು ಜಿಲ್ಲಾ ಪೊಲೀಸ್ ಅಧಿಕಾರಿಗಳು ಅಭಿನಂದಿಸಿದ್ದು, ಪ್ರಕರಣದ ವೇಗವಾದ ಪತ್ತೆಯಿಂದ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.



More Stories
ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಕ್ಕೆ 100 ಫಲಿತಾಂಶ; ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
ವಿದೇಶಿ ಉದ್ಯೋಗದ ಆಮಿಷ ಒಡ್ಡಿ ಯುವಕನಿಗೆ ₹2.49 ಲಕ್ಷ ವಂಚನೆ: ಮೂವರ ವಿರುದ್ಧ ಪ್ರಕರಣ ದಾಖಲು!
ಅಪಘಾತ ಸ್ಥಳಕ್ಕೆ ಎಸ್ಪಿ ಭೇಟಿ; ತುರ್ತು ಸುರಕ್ಷತಾ ಕ್ರಮಕ್ಕೆ ಖಡಕ್ ಸೂಚನೆ