ಹೊನ್ನಾವರ : ಮುರಿದು ಬೀಳುವ ಹಂತದಲ್ಲಿದ್ದ ತಾಲೂಕಿನ ಕರ್ಕಿಯ ಪಾವಿನಕುರ್ವಾದ ತೂಗು ಸೇತುವೆ ವೀಕ್ಷಣೆ ಮಾಡಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೊಸ ಸೇತುವೆ ನಿರ್ಮಾಣ ಮಾಡುವ ಗ್ರಾಮಸ್ಥರ ಸಮಸ್ಯೆ ಆಲಿಸಿದರು.
ಕಳೆದ ಕೆಲ ದಿನಗಳಿಂದ ಪಾವಿನಕುರ್ವಾ ಕರ್ಕಿ ಸಂಪರ್ಕ ಕಲ್ಪಿಸುವ ತೂಗುಸೇತುವೆ ಮುರಿದು ಬೀಳುವ ಹಂತ ತಲುಪಿದ್ದು, ಕೆಲ ತಿಂಗಳ ಹಿಂದೆ ವಾಹನ ಸಂಚಾರ ನಿಷೇದಿಸಲಾಗಿತ್ತು. ಸಮಸ್ಯೆ ಬಗ್ಗೆ ಹಲವು ಬಾರಿ ಸಾರ್ವಜನಿಕರು ಮನವಿ ನೀಡಿದ್ದರು. ಕೊನೆಗೂ ರಾಜ್ಯದ ಲೊಕೊಪಯೋಗಿ ಸಚಿವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರನಿಂದ ಅಹವಾಲು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಇಲ್ಲಿಯ ಸೇತುವೆಯ ಪರಿಸ್ಥಿತಿ ನೋಡಿದ್ದೇನೆ. ವಿವಿಧ ಸೇತುವೆಗಳು ಈ ರೀತಿ ಮುರಿದು ಬೀಳುವ ಸ್ಥಿತಿ ಇದೆ. ಅದನ್ನು ಗಮನಿಸಿ ತೀರಾ ಅಗತ್ಯವಿರುವುದನ್ನು ಪರಿಶೀಲಿಸಿ, ಕ್ರಿಯಾಯೋಜನೆ ಮಾಡುತ್ತಿದ್ದೇವೆ. ಹಣಕಾಸಿನ ಲಭ್ಯತೆಯನ್ನು ಆಧರಿಸಿ ವಿವಿಧ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ, ಶಾಸಕ ದಿನಕರ ಶೆಟ್ಟಿ, ಮಾಜಿ ಶಾಸಕಿ ಶಾರದಾ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ, ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ, ಬ್ಲಾಕ್ ಅಧ್ಯಕ್ಷ ಮಹೇಶ ನಾಯ್ಕ, ವಿನೋದ ನಾಯ್ಕ ಕರ್ಕಿ, ತುಕಾರಾಮ್ ನಾಯ್ಕ, ಶ್ರೀಕಾಂತ್ ಮೊಗೇರ, ಹರೀಶ ನಾಯ್ಕ, ಹರಿಶ್ಚಂದ್ರ ನಾಯ್ಕ ಇನ್ನಿತರ ಮುಖಂಡರು, ಅಧಿಕಾರಿಗಳು ಇದ್ದರು
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ

More Stories
ಕಿರಿಯ ಪ್ರಾಥಮಿಕ ಶಾಲೆ ಯಲಕೊಟ್ಟಿಗೆ 2024 25 ನೇ ಶೈಕ್ಷಣಿಕ ವರ್ಷದ ಉತ್ತಮ ಸಾಧನೆಗಾಗಿ ಜಿಲ್ಲಾ ಮಟ್ಟದ ಉತ್ತಮ ಎಸ್. ಡಿ. ಎಂ. ಸಿ. ಪ್ರಶಸ್ತಿ
‘ಜನಸಾಮಾನ್ಯರಲ್ಲೂ ವಿಜ್ಞಾನದ ಅರಿವು ಅಗತ್ಯ’
ಹೊನ್ನಾವರದಲ್ಲಿ ಇಂದು ಆರ್ ವಿ ದೇಶಪಾಂಡೆ