ಭಟ್ಕಳ: ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ಎಸ್ ವೈದ್ಯ ರವರ ಅಧ್ಯಕ್ಷತೆಯಲ್ಲಿ ತಾಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲಾ ಮುಖ್ಯ ಶಿಕ್ಷಕರ ಪ್ರಗತಿ ಪರಿಶೀಲನಾ ಸಭೆಯು ಮುರುಡೇಶ್ವರದ ಜನತಾ ವಿದ್ಯಾಲಯದಲ್ಲಿ ನಡೆಯಿತು.ಈ ಸಭೆಯಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಳ ಮತ್ತು ಇತರೆ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.ಮಾನ್ಯ ಸಚಿವರು ಎಲ್ಲ ಮುಖ್ಯ ಶಿಕ್ಷಕರಿಂದ ಶಾಲೆಯ ಕೊರತೆಗಳ ಬಗ್ಗೆ ಮಾಹಿತಿ ಪಡೆದರು. ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ್ ರವರು ಈಗಾಗಲೇ ಮುಗಿದಿರುವ ಎರಡು ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ಭಟ್ಕಳದ ಎಸ್ ಎಸ್ ಎಲ್ ಸಿ ಫಲಿತಾಂಶದ ಬಗ್ಗೆ ಮಾಹಿತಿಯನ್ನು ನೀಡಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲ ಮುಖ್ಯ ಶಿಕ್ಷಕರಿಂದ ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಳದ ಬಗ್ಗೆ ಮಾಹಿತಿಯನ್ನು ಪಡೆಯಲಾಯಿತು. ಉಪನಿರ್ದೇಶಕರ ಕಚೇರಿಯ ಡಿ. ವೈ. ಪಿ. ಸಿ. ಭಾಸ್ಕರ ಗಾಂವ್ಕರ್ ಮಾತನಾಡಿ ಎಸ್ ಎಸ್ ಎಲ್ ಸಿ ಫಲಿತಾಂಶ ಹೆಚ್ಚಳದ ಬಗ್ಗೆ ಹಾಗೂ ಅನುದಾನಗಳ ಖರ್ಚು ವೆಚ್ಚಗಳ ಬಗ್ಗೆ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಮಾನ್ಯ ಸಚಿವರು ಮಾತನಾಡಿ ತಾಲೂಕಿನ ಎಲ್ಲಾ 37 ಪ್ರೌಢಶಾಲೆಗಳಲ್ಲೂ ಈ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಶೇಕಡ ನೂರರಷ್ಟು ಆಗಬೇಕು. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವಂತಾಗಬೇಕು. ಮುಂದಿನ ಶೈಕ್ಷಣಿಕ ವರ್ಷದೊಳಗೆ ಯಾವುದೇ ಪ್ರೌಢಶಾಲೆಗಳಲ್ಲಿ ಮೂಲಭೂತ ವ್ಯವಸ್ಥೆಗಳ ಕೊರತೆ ಇರದಂತೆ ಸರಿಪಡಿಸಲಾಗುವುದು ಎಂದು ಹೇಳಿದರು.ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಮತ್ತು ಶಿಕ್ಷಕರಿಗೆ ಫಲಿತಾಂಶ ಹೆಚ್ಚಳದ ಬಗ್ಗೆ ಪ್ರೋತ್ಸಾಹದಾಯಕ ಮಾತುಗಳನ್ನು ಆಡಿದರು.ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಮತಿ ಪೂರ್ಣಿಮಾ ಮೊಗೇರ ಸ್ವಾಗತಿಸಿದರು. ವೇದಿಕೆ ಮೇಲೆ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣಪತಿ ಶಿರೂರ್,ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಸಂತೋಷ್ ಶ್ರೇಷ್ಠಿ ಉಪಸ್ಥಿತರಿದ್ದರು. ಶಿಕ್ಷಣ ಸಂಯೋಜಕ ಅಶೋಕ ಆಚಾರಿ ವಂದಿಸಿದರು.
About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ