ಅಪ್ರಾಪ್ತರಿಗೆ ಅಮಲು ಪದಾರ್ಥ ವಿತರಿಸಿದ ವ್ಯಕ್ತಿ ವಶಕ್ಕೆ

ಭಟ್ಕಳ: ಮುರುಡೇಶ್ವರ ಬೈಲೂರು ವ್ಯಾಪ್ತಿಯಲ್ಲಿ ಅನ್ಯಕೋಮಿನ ಮನೆಗಳಿಗೆ ಕಲ್ಲು ತೂರಾಟ ನಡೆಸಿದ ಪ್ರಕರಣದ ತನಿಖೆ ಮುಂದುವರೆದಿದ್ದು, ಅಪ್ರಾಪ್ತ ಆರೋಪಿಗಳಿಗೆ ಅಮಲು ಪದಾರ್ಥ ವಿತರಿಸಿದ ವ್ಯಕ್ತಿಯನ್ನು ಮುರುಡೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಇಲ್ಲಿನ ಕಾರಗದ್ದೆ 42ನೇ ಕ್ರಾಸ್ ನಿವಾಸಿ ಸಿದ್ದಿಕ್ ಖಾದೀರ್ ಮೀರಾ (62) ಎಂದು ಗುರುತಿಸಲಾಗಿದೆ. ಈತನಿಂದ 1 ಇ-ಸಿಗರೇಟ್ ಪ್ಯಾಕೇಟ್, ಅದಕ್ಕೆ ತುಂಬುವ 9 ರಿಫೀಲ್‌ಗಳನ್ನು ಪೊಲೀಸರು ಜಫ್ತುಪಡಿಸಿಕೊಂಡಿದ್ದಾರೆ. ಈತನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ 1985 ಹಾಗೂ ಬಾಲಾಪರಾಧಿ ನ್ಯಾಯ ಕಾಯ್ದೆ 2015ರಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾ.13ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಜಗದೀಶ ಹಂಚಿನಾಳ್ ತನಿಖೆ ಕೈಗೊಂಡಿದ್ದಾರೆ.


More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ