March 1, 2026

‘ಜನಸಾಮಾನ್ಯರಲ್ಲೂ ವಿಜ್ಞಾನದ ಅರಿವು ಅಗತ್ಯ’

ಹೊನ್ನಾವರ:ಕೃಷಿ,ಮೀನುಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದ ಬಳಕೆ ಹೆಚ್ಚಬೇಕಿದ್ದು ಜನಸಾಮಾನ್ಯರಲ್ಲೂ ವಿಜ್ಞಾನದ ಅರಿವು ಮೂಡಿಸಬೇಕಿದೆ’ ಎಂದು ವಿಜ್ಞಾನಿ ಸುರೇಂದ್ರ ಕುಲಕರ್ಣಿ ಅಭಿಪ್ರಾಯಪಟ್ಟರು. ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ನ ಉತ್ತರ ಕನ್ನಡ ಜಿಲ್ಲಾ ಘಟಕ,ವಿಜ್ಞಾನ ಸಂಘ ಹಾಗೂ ಐಐಸಿ ಇವುಗಳ ಸಹಯೋಗದಲ್ಲಿ ಇಲ್ಲಿನ ಎಸ್.ಡಿ.ಎಂ.ಪದವಿ ಕಾಲೇಜಿನಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಭಾರತದ ಏಕೈಕ ವಿಜ್ಞಾನಿ ಸಿ.ವಿ.ರಾಮನ್ ಅವರ ಸ್ಮರಣೆಯಲ್ಲಿ ಶನಿವಾರ ನಡೆದ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನೊಬೆಲ್ ಪ್ರಶಸ್ತಿ ಪಡೆದ ಶೇ.35 ರಷ್ಟು ವಿಜ್ಞಾನಿಗಳು ಚಿಕ್ಕ ರಾಷ್ಟçವಾದ ಇಸ್ರೆಲ್ ದೇಶದವರು.150 ಕೋಟಿ ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಒಬ್ಬನೇ ವಿಜ್ಞಾನಿ ಇದುವರೆಗೆ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಕುರಿತು ಆಸಕ್ತಿ ಮೂಡಿಸಲು ಶಾಲಾ-ಕಾಲೇಜುಗಳ ಪ್ರಯೋಗಾಲಯಗಳನ್ನು ಅಭಿವೃದ್ಧಿ ಪಡಿಸುವ ಜೊತೆಗೆ ಶಿಕ್ಷಕರಿಗೆ ಹೆಚ್ಚಿನ ತರಬೇತಿ ನೀಡುವ ಅಗತ್ಯವಿದೆ.ಜಿಲ್ಲೆಯ ಶಾಲಾ-ಕಾಲೇಜುಗಳ ಪ್ರಯೋಗಾಲಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಯೋಜನೆ ಕಾರ್ಯಗತಗೊಳಿಸುತ್ತಿದ್ದೇನೆ’ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಜಿ.ಎನ್.ಭಟ್ಟ ಮಾತನಾಡಿ,ಯುವಕರಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ಪುಸ್ತಕಗಳನ್ನು ಪಠ್ಯದಲ್ಲಿ ಅಳವಡಿಸಬೇಕು’ ಎಂದು ಹೇಳಿದರು. ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ನ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜಿ.ಹೆಗಡೆ ಭಾಗವಹಿಸಿದ್ದರು. ಡಾ.ಎಂ.ಪಿ.ಕರ್ಕಿ ಇನಸ್ಟಿಟ್ಯೂಟ್ ನಿರ್ದೇಶಕ ಶಿವರಾಮ ಶಾಸ್ತಿç ಸ್ವಾಗತಿಸಿದರು.ವಿಜ್ಞಾನ ಸಂಘದ ಸಂಯೋಜಕ ಸಂತೋಷ ಗುಡಿಗಾರ ನಿರೂಪಿಸಿದರು.ಭೌತಶಾಸ್ತç ವಿಭಾಗದ ಮುಖ್ಯಸ್ಥ ಸುರೇಶ ಎಸ್.ವಂದಿಸಿದರು.

About The Author

error: Content is protected !!