March 4, 2026

ಮನೆಯಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ


ಭಟ್ಕಳ: ತಾಲೂಕಿನ ಕೋಕ್ತಿನಗರದ ಬಂದರ್ ರೋಡ್ 2ನೇ ಕ್ರಾಸ್‌ನಲ್ಲಿ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮೃತರನ್ನು ಈಶ್ವರ ತಂದೆ ದೇವೇಂದ್ರ ನಾಯ್ಕ (37) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಈಶ್ವರ ಅವರು ತಮ್ಮ ಮನೆಯ ಬೆಡ್ ರೂಮ್‌ನಲ್ಲಿ ಸೀಲಿಂಗ್ ಫ್ಯಾನಿಗೆ ಚೂಡಿದಾರದ ವೇಲನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಮೃತನ ತಂದೆ ದೇವೇಂದ್ರ ನಾಯ್ಕ ಅವರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About The Author

error: Content is protected !!