ಭಟ್ಕಳ: ತಾಲೂಕಿನ ಕೋಕ್ತಿನಗರದ ಬಂದರ್ ರೋಡ್ 2ನೇ ಕ್ರಾಸ್‌ನಲ್ಲಿ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮೃತರನ್ನು ಈಶ್ವರ ತಂದೆ ದೇವೇಂದ್ರ ನಾಯ್ಕ (37) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಈಶ್ವರ ಅವರು ತಮ್ಮ ಮನೆಯ ಬೆಡ್ ರೂಮ್‌ನಲ್ಲಿ ಸೀಲಿಂಗ್ ಫ್ಯಾನಿಗೆ ಚೂಡಿದಾರದ ವೇಲನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಮೃತನ ತಂದೆ ದೇವೇಂದ್ರ ನಾಯ್ಕ ಅವರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ