ಭಟ್ಕಳ: ಬ್ಯಾಂಕ್ ಖಾತೆಯ ದಾಖಲೆಗಳನ್ನು ನಕಲಿ ಸಹಿ ಹಾಗೂ ದಾಖಲೆಗಳ ಮೂಲಕ ಪಡೆದು ವಂಚನೆ ನಡೆಸಿದ ಆರೋಪದಡಿ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂದರ್ ರೋಡ್ 1ನೇ ಕ್ರಾಸ್, ಮಸ್ಕತ್ ಕಾಲೋನಿ ನಿವಾಸಿ ಸಮೀರಾ ತಂದೆ ಅಬ್ದುಲ್ ಮೊಹತೆಶಾಮ್ (41) ಅವರು ಠಾಣೆಗೆ ಹಾಜರಾಗಿ ದೂರು ನೀಡಿದ್ದಾರೆ.

ದೂರಿನ ಪ್ರಕಾರ, ಇಶಾಕ್ ದಾವೂದ್ ಕಾಲೋ ಎಂಬಾತನು ಬ್ಯಾಂಕ್ ಖಾತೆಯ ದಾಖಲೆಗಳನ್ನು ಪಡೆಯುವ ಉದ್ದೇಶದಿಂದ ಅವರ ಹೆಸರಿನಲ್ಲಿ ಮತ್ತೊಬ್ಬ ಮಹಿಳೆಯನ್ನು ಎಸ್‌ಬಿಐ ಭಟ್ಕಳ ಶಾಖೆಗೆ ಕರೆದುಕೊಂಡು ಹೋಗಿ, ಸೃಷ್ಟಿಸಿದ ಸಹಿಯೊಂದಿಗೆ ಅರ್ಜಿ ಸಲ್ಲಿಸಿದ್ದಾನೆ ಎನ್ನಲಾಗಿದೆ. ನಕಲಿ ದಾಖಲೆಗಳನ್ನು ಒದಗಿಸಿ ಖಾತೆ ಸಂಬಂಧಿತ ದಾಖಲೆಗಳನ್ನು ಮೋಸದಿಂದ ಪಡೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.
ಇದಲ್ಲದೆ, ಆ ದಾಖಲೆಗಳನ್ನು ಆಧರಿಸಿ ಧಾರವಾಡ ಉಚ್ಚ ನ್ಯಾಯಾಲಯದಲ್ಲಿ ರಿಟ್ ಪಿಟಿಷನ್ ದಾಖಲಿಸಿ ದೂರುದಾರರಿಗೆ ವಂಚನೆ ಎಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ