ಭಟ್ಕಳ: ತಾಲೂಕಿನ ಬೆಳಲಖಂಡ ಗ್ರಾಮದ ಕಡಸಲಗದ್ದೆ ಪುರಸಭೆ ಕಸ ಹಾಕುವ ಸ್ಥಳದ ಸಮೀಪದ ರಾಜ್ಯ ಹೆದ್ದಾರಿ–50 ಭಟ್ಕಳ–ಸಾಗರ ರಸ್ತೆಯಲ್ಲಿ ಶಾಲಾ ಮಕ್ಕಳನ್ನ ಸಾಗಿಸುತ್ತಿದ್ದ ವಾಹನ ಪಲ್ಟಿಯಾದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಮಾಹಿತಿ ಪ್ರಕಾರ, ನಾಗುವಳ್ಳಿ ಹಾಗೂ ಹಾಡುವಳ್ಳಿ, ಕುಂಟವಾಣಿ ಭಾಗದ ಶಾಲಾ ಮಕ್ಕಳನ್ನು ಭಟ್ಕಳದತ್ತ ಕರೆದುಕೊಂಡು ಬರುತ್ತಿದ್ದ ವೇಳೆ ವಾಹನವನ್ನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಲಾಗುತ್ತಿತ್ತು ಎನ್ನಲಾಗಿದೆ. ಈ ಸಂದರ್ಭದಲ್ಲಿ ವಾಹನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಅಪಘಾತದ ಪರಿಣಾಮವಾಗಿ ವಾಹನದಲ್ಲಿದ್ದ 13 ಮಂದಿ ಶಾಲಾ ವಿದ್ಯಾರ್ಥಿಗಳಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ.
ಚಾಲಕನಿಗೂ ಸಾದಾ ಸ್ವರೂಪದ ಗಾಯಗಳಾಗಿದ್ದು, ಗಾಯಾಳುಗಳನ್ನೆಲ್ಲ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ನಾಗುವಳ್ಳಿ ಮೂಲದ ಚಾಲಕ ಮಂಜುನಾಥ ಜಟ್ಟಪ್ಪ ನಾಯ್ಕ ವಿರುದ್ಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ