ಭಟ್ಕಳ: ತಾಲೂಕಿನ ಮುರ್ಡೇಶ್ವರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಭಟ್ಕಳ ಮೂಲದ ಇನಾಯತುಲ್ಲಾ (ತಂದೆ: ರಸೂಲ್ ಸಾಬ್ ಸವಣೂರು) ಅವರನ್ನು ಮುರ್ಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಬಂಧಿತನಿಂದ ಸುಮಾರು 32 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ಒಂದು ಬೈಕ್ ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯನ್ನು ಮುರ್ಡೇಶ್ವರ ವೃತ್ತ ನಿರೀಕ್ಷಕ ಜಗದೀಶ್ ಹಂಚನಾಳ್ ಮಾರ್ಗದರ್ಶನದಲ್ಲಿ, ಮುರ್ಡೇಶ್ವರ ಠಾಣೆಯ ಪಿಎಸೈ ಹಣಮಂತ ಬಿರಾದಾರ್ ಹಾಗೂ ಪಿಎಸೈ
ಲೋಕನಾಥ್ ರಾಠೋಡ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಅರುಣ್ ಪಿಂಟೋ, ಸುಬ್ರಹ್ಮಣ್ಯ, ಮಂಜುನಾಥ್ ಲಕ್ಮಾಪುರ, ಮಂಜುನಾಥ್ ಮಡಿವಾಳ್ ಮತ್ತು ಸಂದೀಪ್ ಪಟಗಾರ ತಂಡ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದೆ.

More Stories
ಮಧ್ಯಪ್ರಾಚ್ಯ ಉದ್ವಿಗ್ನತೆ ಭೀತಿ: ಭಟ್ಕಳದಲ್ಲಿ ಪೆಟ್ರೋಲ್ ಬಂಕ್ಗಳಲ್ಲಿ ದೀರ್ಘ ಸಾಲು
ಭಟ್ಕಳದಲ್ಲಿ ಶಾಲಾ ಮಕ್ಕಳನ್ನ ಸಾಗಿಸುತ್ತಿದ್ದ ವಾಹನ ಪಲ್ಟಿ: 13 ವಿದ್ಯಾರ್ಥಿಗಳಿಗೆ ಸಣ್ಣ ಗಾಯ
ಭಟ್ಕಳದಲ್ಲಿ ಸಂಭ್ರಮದ ಹೋಳಿ ಹಬ್ಬ