ಕೆಆರ್ ಪೇಟೆ : ಸಾರ್ವಜನಿಕರು ಮುಷ್ಕರದ ಅವಧಿಯಲ್ಲಿ ಆಗುವ ಅನಾನುಕೂಲಕ್ಕೆ ಸಹಕರಿಸುವಂತೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ.ಕೆ. ಎಸ್.ಸಾಗರ್ ಮನವಿ. ಆರೋಗ್ಯ ಇಲಾಖೆ ನೌಕರರು ಹಾಗೂ ವೈದ್ಯರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳ ಈಡೇರಿಕೆ ಕುರಿತಂತೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘ ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ವೃಂದ ಸಂಘಗಳ ನೇತೃತ್ವದಲ್ಲಿ ಮಾರ್ಚಿ 11ರಿಂದ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಮಂಡ್ಯ ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ಕೆ.ಎಸ್.ಸಾಗರ್ ಹೇಳಿದರು.
ಅವರು ಕೃಷ್ಣರಾಜಪೇಟೆ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾರ್ಚಿ 11ರಿಂದ ನಡೆಯಲಿರುವ ಅನಿರ್ದಿಷ್ಟಾವಧಿ ವೈದ್ಯರ ಮುಷ್ಕರ ಕುರಿತು ಮಾತನಾಡಿದರು. ಮಾರುತಿ ಹನ್ನೊಂದರಿಂದ ಹದಿನೈದರವರೆಗೆ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆ ತಾಲೂಕು ಆಸ್ಪತ್ರೆ ಸಮುದಾಯ ಆರೋಗ್ಯ ಕೇಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಡಿಸ್ಪೆನ್ಸರಿಗಳಲ್ಲಿನ ಎಲ್ಲಾ ವೃಂದದ ವೈದ್ಯರು ಅಧಿಕಾರಿ ನೌಕರರು ಕಪ್ಪುಪಟ್ಟಿ ಧರಿಸಿ ಹೊರರೋಗಿಗಳ ಚಿಕಿತ್ಸೆಯನ್ನು ಸ್ಥಗಿತಗೊಳಿಸಿ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ರಾಜ್ಯ ಸರ್ಕಾರವು ವೈದ್ಯರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರುತಿ ಹದಿನಾರು ರಿಂದ ಬೇಡಿಕೆ ಈಡೇರುವ ವರವಿಗೂ ರಾಜ್ಯದ ಆರೋಗ್ಯ ಇಲಾಖೆಯ ಎಲ್ಲಾ ವೈದ್ಯರು, ಅಧಿಕಾರಿ ನೌಕರರು ಅನಿರ್ದಿಷ್ಟಾವಧಿವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರವನ್ನು ತೀವ್ರ ಗೊಳಿಸಲಾಗುವುದು ಎಂದು ಡಾ.ಸಾಗರ್ ವಿವರಿಸಿದರು. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಸಮರ್ಪಕವಾಗಿ ಔಷಧಿಗಳನ್ನು ಇಲಾಖೆಯಿಂದ ಸರಬರಾಜು ಮಾಡುವುದು, ಬೃಂದಾ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ ಮೂರು ವರ್ಷಗಳಿಗೊಮ್ಮೆ ತಿದ್ದುಪಡಿ ಮಾಡಲು ಸರ್ಕಾರಿ ಆದೇಶವಿದ್ದರೂ ಆದೇಶ ಉಲ್ಲಂಸಿ 1973 ರಿಂದ ಇಲ್ಲಿಯವರೆಗೆ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿಲ್ಲ ಈ ಬಗ್ಗೆ ಶೀಘ್ರ ತಿದ್ದುಪಡಿ ಮಾಡುವುದು, ಆರೋಗ್ಯ ಇಲಾಖೆಯ ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನು ಕಾಲಕಾಲಕ್ಕೆ ಪ್ರಕಟಿಸುವುದು ಆರೋಗ್ಯ ಇಲಾಖೆಯ ಅಧಿಕಾರಿ ನೌಕರರಿಗೆ ಕೂಡಲೇ ಮುಂಬಡ್ತಿಗಳನ್ನು ನೀಡುವುದು, ಸೇವಾ ನಿರತ ವೈದ್ಯರು ಅಧಿಕಾರಿ ನೌಕರರು ಉನ್ನತ ವ್ಯಾಸಂಗ ಮಾಡಲು ಅವಕಾಶ ನೀಡುವುದು, ವರ್ಗಾವಣೆ ಕಾಯ್ದೆಯಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸದೆ ಅವೈಜ್ಞಾನಿಕವಾಗಿ ಕೌನ್ಸಿಲಿಂಗ್ ವರ್ಗಾವಣೆ ಮಾಡುತ್ತಿರುವುದನ್ನು ಕೂಡಲೇ ಸರಿಪಡಿಸುವುದು, ವೈದ್ಯಕೀಯ ಶಿಕ್ಷಣ ಇಲಾಖೆ , ಸ್ವಾಯತ್ತ ಸಂಸ್ಥೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಮಹಾನಗರ ಪಾಲಿಕೆ ಹಾಗೂ ನಗರ ಪಾಲಿಕೆಗಳಲ್ಲಿ ಮಂಜೂರಾಗಿರುವ ಆರೋಗ್ಯ ಇಲಾಖೆಯ ಎನ್ ಕೇಡರ್ ಹುದ್ದೆಗಳಿಗೆ ನೇಮಕಾತಿ ಮುಂಭಡ್ತಿ ಮತ್ತು ವರ್ಗಾವಣೆ ಗಳಿಗೆ ಆರೋಗ್ಯ ಇಲಾಖೆಯ ನೌಕರರನ್ನೇ ನಿಯೋಜಿಸುವುದು, ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ದೃಷ್ಟಿಯಿಂದ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರು ಅರೆ ವೈದ್ಯಕೀಯ ಸಿಬ್ಬಂದಿಗಳು ಹಾಗೂ ಇತರೆ ವೃಂದದ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವುದು, ಗುತ್ತಿಗೆ ವೈದ್ಯರು ನೌಕರರು ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಿ ಕಾಲಕಾಲಕ್ಕೆ ಸೂಕ್ತ ವೇತನ ಹೆಚ್ಚಳ ಮಾಡುವುದು, ಕೇಂದ್ರ ಪುರಸ್ಕೃತ ಯೋಜನೆ ಅಡಿ ಕೆಲಸ ಮಾಡುತ್ತಿರುವ 6,000ಕ್ಕೂ ಹೆಚ್ಚಿನ ಅಧಿಕಾರಿ ನೌಕರರಿಗೆ ಪ್ರತಿ ತಿಂಗಳ ಮೊದಲ ವಾರವೇ ವೇತನ ಹಾಗೂ ಭತ್ಯೆಗಳನ್ನು ನೀಡುವುದು, ವೈದ್ಯರು ತಜ್ಞ ವೈದ್ಯರು ಹಾಗೂ ಇತರೆ ಸಿಬ್ಬಂದಿಯವರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಮಾದರಿಯಲ್ಲಿ ವೇತನ ನೀಡುವುದು ಸೇರಿದಂತೆ, ಸರ್ಕಾರಿ ವೈದ್ಯರುಗಳು ತಮ್ಮ ಕರ್ತವ್ಯದ ಅವಧಿಮುಗಿದ ನಂತರ ಖಾಸಗಿ ಸೇವೆ ಮಾಡಲು ಈ ಹಿಂದಿನಂತೆ ಅವಕಾಶ ನೀಡುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಶೀಘ್ರವೇ ಇತ್ಯರ್ಥಪಡಿಸಬೇಕು ಎಂದು ಒತ್ತಾಯಿಸಿ ರಾಜ್ಯಾದ್ಯಂತ ಮಾರ್ಚಿ ಹನ್ನೊಂದರಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ತಮ್ಮ ತೊಂದರೆಗಳಿಗೆ ಹಾಗೂ ಅನಾನುಕೂಲಗಳಿಗೆ ಸಹಕರಿಸಬೇಕು ಎಂದು ಡಾ. ಸಾಗರ್ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಅಜಿತ್ ಹಾಗೂ ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಮಂಜುಳಾ ಉಪಸ್ಥಿತರಿದ್ದರು. ವರದಿ.ಡಾ.ಕೆ.ಆರ್.ನೀಲಕಂಠ, ಕೃಷ್ಣರಾಜಪೇಟೆ, ಮಂಡ್ಯ.

More Stories
ಬಡ ರೈತನ ಮಗ, ವಕೀಲ ಕಾಮನಹಳ್ಳಿ ಬೋರೇಗೌಡರ ಜೀವನ ಸಾಧನೆಗೆ ಗವಿಮಠ ಶ್ರೀಗಳ ಮೆಚ್ಚುಗೆ..
ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್ ಅವರಿಗೆ ಹೃದಯಸ್ಪರ್ಶಿ ಸನ್ಮಾನ..ಅಭಿನಂದನೆ..
ಸೊಳ್ಳೇಪುರ ಹಾಲು ಉತ್ಪಾದಕ ಸಹಕಾರ ಸಂಘ ಕಾಂಗ್ರೆಸ್ ವಷಕ್ಕೆ