March 6, 2026

ಹೆರಾಳಿಯಲ್ಲಿ ಹೋಳಿ ಹಬ್ಬ ಸಂಭ್ರಮ

ಹೊನ್ನಾವರ: ತಾಲೂಕಿನ ಹೆರಾಳಿ ಗ್ರಾಮದಲ್ಲಿ ಹೋಳಿ ಹಬ್ಬವನ್ನು ಗ್ರಾಮಸ್ಥರು ಸಂಭ್ರಮದಿಂದ ಆಚರಿಸಿದರು. ಮೊದಲ ಬಾರಿಗೆ ಆಯೋಜಿಸಲಾಗಿದ್ದ ಈ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.
ಕಾರ್ಯಕ್ರಮದಲ್ಲಿ ಸುಮಾರು 60 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದು ವಿಶೇಷವಾಗಿತ್ತು. ಮಕ್ಕಳಿಂದ ಹಿಡಿದು ವಯೋವೃದ್ಧರ ತನಕ ಎಲ್ಲರೂ ಹರ್ಷದಿಂದ ಪಾಲ್ಗೊಂಡು ಪರಸ್ಪರ ಬಣ್ಣ ಹಚ್ಚಿಕೊಂಡು ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು.


ಈ ಸಂದರ್ಭದಲ್ಲಿ ವಿವಿಧ ಮನರಂಜನಾ ಆಟಗಳನ್ನು ಆಯೋಜಿಸಲಾಗಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡರು. ಗ್ರಾಮಸ್ಥರು ಒಂದಾಗಿ ಸೇರಿ ಸಂಭ್ರಮಿಸಿದುದು ಕಾರ್ಯಕ್ರಮಕ್ಕೆ ಇನ್ನಷ್ಟು ಮೆರಗು ತಂದಿತು.
ಮುಂದೆಯೂ ಇದೇ ರೀತಿಯಾಗಿ ಎಲ್ಲರೂ ಒಂದಾಗಿ ಸೇರಿ ಹಬ್ಬಗಳನ್ನು ಆಚರಿಸಿ, ಊರಿನ ಒಗ್ಗಟ್ಟು ಹಾಗೂ ಸೌಹಾರ್ದವನ್ನು ಹೆಚ್ಚಿಸೋಣ ಎಂಬ ಸಂಕಲ್ಪವನ್ನು ಗ್ರಾಮಸ್ಥರು ವ್ಯಕ್ತಪಡಿಸಿದರು.

About The Author

error: Content is protected !!