March 6, 2026

ತಾಲ್ಲೂಕು ಆಡಳಿತ ಸೌಧದಲ್ಲಿ ಹೋಳಿ ಸಂಭ್ರಮ

ಭಟ್ಕಳ: ಹೋಳಿ ಹಬ್ಬದ ಅಂಗವಾಗಿ ಪಟ್ಟಣದ ತಾಲ್ಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ ಕಚೇರಿ ಹಾಗೂ ಉಪವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ಗುರುವಾರ ಅಧಿಕಾರಿಗಳು ಮತ್ತು ಸಿಬ್ಬಂದಿ ಪರಸ್ಪರ ಗುಲಾಲ್ ಹಚ್ಚಿಕೊಂಡು ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.


ಕಚೇರಿ ಕಾರ್ಯಗಳ ಮಧ್ಯೆಯೇ ಸಿಬ್ಬಂದಿ ಒಬ್ಬರಿಗೊಬ್ಬರು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸಿಹಿ ಹಂಚಿಕೊಂಡರು. ಕಚೇರಿ ಆವರಣದಲ್ಲಿ ಕೆಲಕಾಲ ಹಬ್ಬದ ಸಂಭ್ರಮ ಮೂಡಿದ್ದು, ಪರಸ್ಪರ ಬಣ್ಣ ಹಚ್ಚಿಕೊಂಡು ಸ್ನೇಹಭಾವ ವ್ಯಕ್ತಪಡಿಸಿದರು. ಬಳಿಕ ಎಲ್ಲರು ಸಮೂಹವಾಗಿ ಫೋಟೋ ತೆಗೆದುಕೊಂಡು ಸಂಭ್ರಮ ಹಂಚಿಕೊಂಡರು.


ಹಬ್ಬದ ಹಿನ್ನೆಲೆಯಲ್ಲಿ ಕಚೇರಿಗಳಲ್ಲಿ ಸಹೋದರತ್ವ ಮತ್ತು ಸ್ನೇಹಭಾವ ಹೆಚ್ಚಾಗಲಿ ಎಂದು ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ ಸಿಬ್ಬಂದಿಗೆ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಉಪತಹಶೀಲ್ದಾರರು, ಶಿರಸ್ತೇದಾರರು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು, ಕಚೇರಿ ಸಿಬ್ಬಂದಿ ಹಾಗೂ ಗ್ರಾಮ ಸಹಾಯಕರು ಉಪಸ್ಥಿತರಿದ್ದರು

About The Author

error: Content is protected !!