ಭಟ್ಕಳ: ಯಾವುದೋ ವೈಯಕ್ತಿಕ ಕಾರಣದಿಂದ ಮನನೊಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬನು ಮನೆದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ತಾಲೂಕಿನ ಹೆಬಳೆಯ ಹೊನ್ನೆಗದ್ದೆಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕೌಶಿಕ ಸುಬ್ರಾಯ ನಾಯ್ಕ (18) ಎಂದು ಗುರುತಿಸಲಾಗಿದೆ. ಈತನು ಓದಿನಲ್ಲಿ ಬುದ್ಧಿವಂತನಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ಯಾವುದೋ ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಮನನೊಂದಿದ್ದಾನೆ ಎನ್ನಲಾಗಿದೆ.
ಶುಕ್ರವಾರ ಬೆಳಿಗ್ಗೆ ಹೆಬಳೆಯ ಹೊನ್ನೆಗದ್ದೆಯಲ್ಲಿರುವ ತನ್ನ ಮನೆಯ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ಉರುಳು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
ಕೌಶಿಕನು ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಕನ್ನಡ ಮತ್ತು ಇಂಗ್ಲಿಷ್ ವಿಷಯಗಳ ಪರೀಕ್ಷೆಯನ್ನು ಬರೆದಿದ್ದು, ಶುಕ್ರವಾರ ನಡೆಯಬೇಕಿದ್ದ ಭೌತಶಾಸ್ತ್ರ (Physics) ಪರೀಕ್ಷೆಯನ್ನು ಬರಬೇಕಾಗಿತ್ತು. ಆದರೆ ಅದಕ್ಕೂ ಮುನ್ನವೇ ಈ ದುರ್ಘಟನೆ ಸಂಭವಿಸಿದ್ದು ಕುಟುಂಬದವರಲ್ಲಿ ಮತ್ತು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಈ ಸಂಬಂಧ ಮೃತ ವಿದ್ಯಾರ್ಥಿಯ ತಂದೆ ಸುಬ್ರಾಯ ಬರವಯ್ಯ ನಾಯ್ಕ ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

More Stories
ನಿವೃತ್ತ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ
ನಗರ ಹಿಂದೂ ಸಂಗಮ ಯಶಸ್ಸಿಗೆಸಹಕರಿಸಿದ ಪೊಲೀಸರಿಗೆ ಧನ್ಯವಾದ
ಮಾರ್ಚ್ 14ರಂದು ಭಟ್ಕಳದಲ್ಲಿ ಮೊದಲ ಲೋಕ್ ಅದಾಲತ್