ಭಟ್ಕಳ: ಹೆದ್ದಾರಿಯಲ್ಲಿ ಸಂಚರಿಸುವ ಜನರನ್ನು ದರೋಡೆ ಮಾಡುವ ಉದ್ದೇಶದಿಂದ ಸಂಚು ರೂಪಿಸಿದ್ದ ಯುವಕನನ್ನು ಭಟ್ಕಳ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ತಾಲೂಕಿನ ಹುರುಳಿಸಾಲ ನಿವಾಸಿ ಅಬ್ದುಲ್ ಸಲಾ ತಂದೆ ಮೊಹಮ್ಮದ್ ಸಲಿಂ( 23)
ಬಂಧಿತ ಆರೋಪಿ.

ಭಟ್ಕಳ–ಸಾಗರ ರಾಜ್ಯ ಹೆದ್ದಾರಿಯ ಗುಳೆಮೆ ಕ್ರಾಸ್ ಸಮೀಪದಲ್ಲಿ ಸ್ವಿಫ್ಟ್ ಕಾರಿನಲ್ಲಿ ಕುಳಿತು ದರೋಡೆ ಮಾಡಲು ಸಂಚು ರೂಪಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಚಾಕು, ಮಂಕಿ ಕ್ಯಾಪ್, ಪಕ್ಕಡ್, ಖಾರದ ಪುಡಿ, ಟಾರ್ಚ್ ಸೇರಿದಂತೆ ದರೋಡೆಗೆ ಬಳಸುವ ವಿವಿಧ ವಸ್ತುಗಳನ್ನು ಇಟ್ಟುಕೊಂಡಿದ್ದನು. ರಾತ್ರಿ ವೇಳೆ ಒಬ್ಬಂಟಿಯಾಗಿ ಸಂಚರಿಸುವ ಜನರನ್ನು ತಡೆದು ಹಣ ಹಾಗೂ ಬೆಲೆಬಾಳುವ ವಸ್ತುಗಳನ್ನು ಕಸಿದುಕೊಳ್ಳುವ ಉದ್ದೇಶ ಹೊಂದಿದ್ದನೆಂದು ತಿಳಿದುಬಂದಿದೆ.
ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಭಟ್ಕಳ ಗ್ರಾಮೀಣ ಠಾಣೆ ಸಿಪಿಐ ವೆಂಕಟೇಶ ಮುರನಾಳ ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದೆ.

More Stories
ನಿವೃತ್ತ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ
ನಗರ ಹಿಂದೂ ಸಂಗಮ ಯಶಸ್ಸಿಗೆಸಹಕರಿಸಿದ ಪೊಲೀಸರಿಗೆ ಧನ್ಯವಾದ
ಮಾರ್ಚ್ 14ರಂದು ಭಟ್ಕಳದಲ್ಲಿ ಮೊದಲ ಲೋಕ್ ಅದಾಲತ್