ಭಟ್ಕಳ: ಭಾರತೀಯ ಜನತಾ ಪಾರ್ಟಿ ಭಟ್ಕಳ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸವಿತಾ ಗೊಂಡ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ವೇಳೆ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯ್ಕ ಮಾತನಾಡಿ, ಮಹಿಳೆಯರ ಸಾಮಾಜಿಕ ಸ್ಥಿತಿ ಹಾಗೂ ಭಾರತದಲ್ಲಿ ಮಹಿಳೆಯರಿಗೆ ದೊರೆಯುತ್ತಿರುವ ಗೌರವ ಮತ್ತು ಅವಕಾಶಗಳ ಕುರಿತು ವಿವರಿಸಿದರು. ಮತ್ತೋರ್ವ ಜಿಲ್ಲಾ ಕಾರ್ಯದರ್ಶಿ ಸುಬ್ರಾಯ್ ದೇವಾಡಿಗ ಮಾತನಾಡಿ
ಮಹಿಳೆಯರ ಪಾತ್ರ, ದೇಶದ ಸಂಸ್ಕೃತಿ-ಇತಿಹಾಸ ಮತ್ತು ಪ್ರಸ್ತುತ ಮಹಿಳೆಯರಿಗೆ ಇರುವ ಅವಕಾಶಗಳ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಾದ ಸರಸ್ವತಿ ಭಂಡಾರಿ, ಪವಿತ್ರ ಮಡಿವಾಳ, ಸಾಕ್ಷಿ ಡಿ. ನಾಯ್ಕ್, ಆಶಿತಾ ನಾಯ್ಕ ಹಾಗೂ ತ್ರಿಶಾ ಖಾರ್ವಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾನಿ ಶಾಂತಾರಾಮ ವಹಿಸಿದ್ದರು. ಯಮುನಾ ದಿನೇಶ್ ನಾಯ್ಕಪ್ರಾರ್ಥನೆ ಸಲ್ಲಿಸಿದರು. ಮಹಿಳಾ ಮೋರ್ಚಾ ಅಧ್ಯಕ್ಷೆ ಸುನಿತಾ ಹೆರೂರ್ಕರ್ ಕಾರ್ಯಕ್ರಮವನ್ನು ನಿರೂಪಿಸಿದರು.
ಭಟ್ಕಳ ಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ನಾಯ್ಕ ಉಪಸ್ಥಿತರಿದ್ದರು. ವಿಜಯ ಮತ್ತು ಕುಪ್ಪು ಸ್ವಾಗತ ಹಾಗೂ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಭಾಗವಹಿಸಿದ್ದರು.

More Stories
ಎಲ್ಪಿಜಿ ದುರ್ಬಳಕೆ ತಡೆಗೆ ಕಟ್ಟುನಿಟ್ಟಿನ ಕ್ರಮ: ಭಟ್ಕಳದಲ್ಲಿ ಹೋಟೆಲ್ಗಳ ತಪಾಸಣೆ
ರೈಲಿನಿಂದ ಬಿದ್ದು ವೃದ್ಧನ ದಾರುಣ ಸಾವು
ತೋಟಗಾರಿಕೆ ಇಲಾಖೆಯಿಂದ 10 ತಿಂಗಳ ತರಬೇತಿಗೆ ಅರ್ಜಿ ಆಹ್ವಾನ