ಭಟ್ಕಳ: ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಜಾನುವಾರು ಸಾಗಾಟ ಮಾಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿತರಾಗಿ ಬಂದರ್ ರೋಡ್ 3ನೇ ಕ್ರಾಸ್‌ನ ನಿವಾಸಿ ಸರ್ವೋಶ ಹುಸೇನ್ (37) ಹಾಗೂ ಬೆಂಗಳೂರಿನ ಶಣ್ಮುಖ ಕೆ.ಎಸ್. ಗುರುತಿಸಲಾಗಿದೆ.
ಇವರು ಸಕ್ಷಮ ಪ್ರಾಧಿಕಾರದಿಂದ ಜಾನುವಾರು ಸಾಗಾಟಕ್ಕೆ ಅಗತ್ಯ ಪರವಾನಿಗೆ ಪಡೆಯದೆ, ವಾಹನದಲ್ಲಿ ಸುಮಾರು ₹6 ಲಕ್ಷ ಮೌಲ್ಯದ ಎರಡು ಕೋಣಗಳನ್ನು ಕೇರಳ ರಾಜ್ಯದ
ಮಲ್ಲಪುರಂನಿಂದ ಭಟ್ಕಳಕ್ಕೆ ಸಾಗಾಟ ಮಾಡಿಕೊಂಡು ಬಂದು ಕಟ್ಟಿ ಹಾಕಿರುವುದು ತಿಳಿದುಬಂದಿದೆ.


ಈ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ವೆಂಕಟೇಶ ಮುರನಾಳ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಈ ಕುರಿತು ಗ್ರಾಮೀಣ ಠಾಣೆಯ ಪಿಎಸ್‌ಐ ಮಲ್ಲಿಕಾರ್ಜುನ ಕೊರಾಣಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ