

ಭಟ್ಕಳ: ಹೃದಯಾಘಾತದಿಂದ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಭಟ್ಕಳ ಪಟ್ಟಣದಲ್ಲಿ ನಡೆದಿದೆ.
ಮೃತರನ್ನು ಕುಕುನಿರ್ ನಿವಾಸಿ ಮಂಜುನಾಥ ಜಟ್ಟ ನಾಯ್ಕ (54) ಎಂದು ಗುರುತಿಸಲಾಗಿದೆ. ಅವರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.
ಮಂಜುನಾಥ ಜಟ್ಟ ನಾಯ್ಕ ಅವರು ಮನೆಯಿಂದ ಕೂಲಿ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟಿದ್ದರು. ಬಳಿಕ ಭಟ್ಕಳ ನಗರದ ಭಾರತ ಪೆಟ್ರೋಲ್ ಬಂಕ್ ಪಕ್ಕದ ದಿಲ್ಮನ್ ಮನೆ ಸಮೀಪದ ಖಾಲಿ ಜಾಗದಲ್ಲಿ ಅವರು ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಹೃದಯಾಘಾತ ಅಥವಾ ಅಸ್ವಸ್ಥತೆಯಿಂದ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಮೃತನ ಸಂಬಂಧಿ ಕೃಷ್ಣ ಸೋಮಯ್ಯ ನಾಯ್ಕ ಅವರು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

About The Author




More Stories
ತೆರೆದ ಚರಂಡಿ ಹೊಂಡ: ಅಪಾಯದ ನಡುವೆ ಭಟ್ಕಳದ ವಾಹನ ಸವಾರರ ಸಂಚಾರ.
ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಮಂಕಾಳ್ ಎಸ್. ವೈದ್ಯ ಆಯ್ಕೆ: ಮಾಜಿ ಸಚಿವರಿಗೆ ಭಟ್ಕಳದಲ್ಲಿ ಅದ್ಧೂರಿ ಸ್ವಾಗತ.
ಆಗಸ್ಟ್ 18ರಂದು ಭಟ್ಕಳದಲ್ಲಿ ಬೃಹತ್ ರಕ್ತದಾನ ಶಿಬಿರ: ಡಾ. ಸುರೇಶ ನಾಯಕ್ ಸ್ಮರಣಾರ್ಥ ಆಯೋಜನೆ