ಹೊನ್ನಾವರ : ತಾಲೂಕಿನ ಹಳದೀಪುರ ಅಗ್ರಹಾರ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ನವಿಲಗೋಣ ಗ್ರಾಮದ ಚಿಪ್ಪಿಹಕ್ಕಲ್ ನಿವಾಸಿ ವೆಂಕಟೇಶ ಗೋಪಾಲಕೃಷ್ಣ ವೈದ್ಯ ಮೃತಪಟ್ಟ ವ್ಯಕ್ತಿಎಂದು ತಿಳಿದುಬಂದಿದೆ. ಅಡುಗೆ ಕೆಲಸ ಮಾಡುತ್ತಿದ್ದ ಇವರು, ಮನೆಯಿಂದ ಹಳದೀಪುರಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬೈಕ್ ಸವಾರ ಹೆಲ್ಮೆಟ್ ಧರಿಸದ ಕಾರಣ ತಲೆ ಭಾಗಕ್ಕೆ ಗಂಭೀರ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಮೃತದೇಹವನ್ನು ತಾಲೂಕ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಈ ಸಂಭದ ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ


More Stories
ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಕೊರತೆ; ಸಾರ್ವಜನಿಕರ ಕೆಲಸಗಳಿಗೆ ತೀವ್ರ ವಿಳಂಬ
ಏಷ್ಯನ್ ಚೆಸ್ ಚಾಂಪಿಯನ್ಶಿಪ್: ಹೊನ್ನಾವರದ ಸಮರ್ಥ ಜಗದೀಶ್ ರಾವ್ಗೆ ೪ನೇ ಸ್ಥಾನ
ಮಂಕಿ: ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ವಾರ್ಷಿಕ ಕ್ರೀಡಾಕೂಟ ಸಂಭ್ರಮ