ಭಟ್ಕಳ: ಭಟ್ಕಳ ರೈಲ್ವೆ ಸ್ಟೇಷನ್‌ನಲ್ಲಿ ನಡೆದ ಘಟನೆಯಲ್ಲಿ ಯುವಕನ ಸಮಯಪ್ರಜ್ಞೆಯಿಂದ ಮಹಿಳೆಯೊಬ್ಬರು ಅಪಾಯದಿಂದ ಪಾರಾದ ಘಟನೆ ನಡೆದಿದೆ.
ಬೆಂಗಳೂರುದಿAದ ಕಾರವಾರದತ್ತ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಬೆಳಗಿನ ಜಾವ ತಮ್ಮ ಬ್ಯಾಗ್ ಕಳೆದುಕೊಂಡ ಪರಿಣಾಮ ಆತಂಕಕ್ಕೊಳಗಾಗಿ, ಗಾಬರಿಯಲ್ಲಿ ಚಲಿಸುತ್ತಿದ್ದ ರೈಲಿನಿಂದ ಇಳಿಯುವಾಗ ಕುಸಿದು ಬಿದ್ದರು. ಈ ಸಂದರ್ಭದಲ್ಲಿ ಭಟ್ಕಳ ತೆಂಗಿನಗುAಡಿ ನಿವಾಸಿ ಸಂದೀಪ್ ಶೆಟ್ಟಿ ಅವರು ತಕ್ಷಣ ಸ್ಪಂದಿಸಿ ಮಹಿಳೆಯನ್ನು ಎಳೆದು ಸಂಭವನೀಯ ಅಪಾಯವನ್ನು ತಪ್ಪಿಸಿದರು.
ಇದಲ್ಲದೆ, ಮಹಿಳೆಯ ಕಳೆದುಹೋದ ಬ್ಯಾಗ್‌ನ್ನು ಮರಳಿ ದೊರಕಿಸಲು ಸಹ ಅವರು ಪ್ರಯತ್ನಿಸಿದ್ದು, ಅವರ ಮಾನವೀಯತೆ ಹಾಗೂ ಸಮಯಪ್ರಜ್ಞೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.


More Stories
ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಭಟ್ಕಳದ ಯುವತಿ ದುರ್ಮರಣ
ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ
ಮತದಾರರ ಪಟ್ಟಿ ಪರಿಷ್ಕರಣೆ ಪ್ರಜಾಪ್ರಭುತ್ವದ ಅಡಿಪಾಯ; ಶಾಸಕ ಮಂಕಾಳ ವೈದ್ಯ